ತುಮಕೂರು: ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ಜಾತಿ ಗಣತಿಯ ವರದಿಯನ್ನು ಸರ್ಕಾರ ತಕ್ಷಣ ಸ್ವೀಕರಿಸಿ, ಅದರ ಆಧಾರದ ಮೇಲೆ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಮೀಸಲಾತಿ ಕಲ್ಪಿಸಬೇಕು. ಈ ಬಗ್ಗೆ ಸುಪ್ರೀಂ ಕೋರ್ಟ್ಗೆ ಸರಿಯಾಗಿ ಮನವರಿಕೆ ಮಾಡಿಕೊಡಬೇಕು. ಮೀಸಲಾತಿ ಕಲ್ಪಿಸದೆ ಚುನಾವಣೆ ನಡೆಸಬಾರದು ಎಂದುವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕುರುಬರ ಜಿಲ್ಲಾ ಮಟ್ಟದ ಜಾಗೃತಿ ಸಭೆಯಲ್ಲಿ ಮಾತನಾಡಿದ ಅವರು,ಕೋರ್ಟ್ ಆದೇಶ ನೆಪ ಮಾಡಿಕೊಂಡು ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ನಿಲ್ಲಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ಇಂತಹ ನೆಪ ಮುಂದಿಟ್ಟುಕೊಂಡು ಪರಿಶಿಷ್ಟರಿಗೂ ಮೀಸಲಾತಿ ನಿಲ್ಲಿಸುವ ಹುನ್ನಾರವನ್ನು ಬಿಜೆಪಿ ನಡೆಸಿದೆ.ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದರು.

ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡಲು ಬೇಕಾದ ಕುಲಶಾಸ್ತ್ರೀಯ ಅಧ್ಯಯನ ನಡೆಸುವ ಜವಾಬ್ದಾರಿಯನ್ನು ಮೈಸೂರು ವಿಶ್ವವಿದ್ಯಾಲಯಕ್ಕೆ ವಹಿಸಲಾಗಿದೆ. ಇದಕ್ಕೆ ಬೇಕಾದ ಹಣ ನೀಡಲಾಗಿದೆ. ಆದರೆ ಯಾವುದೇ ಪ್ರಗತಿಯಾಗಿಲ್ಲ. ಈವರೆಗೂ ವರದಿ ಸಿದ್ಧವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೀದರ್, ಕಲಬುರಗಿ, ಯಾದಗಿರಿ ಭಾಗದ ಜಿಲ್ಲೆಗಳಲ್ಲಿರುವ ಕುರುಬರ ಕೆಲ ಪಂಗಡಗಳನ್ನು ಗೊಂಡ ಎಂದು ಕರೆಯಲಾಗುತ್ತಿದ್ದು, ಈ ಸಮುದಾಯಕ್ಕೆ ಎಸ್ಟಿ ಮೀಸಲಾತಿ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಿದ್ದರೂ ಈವರೆಗೂ ನಿರ್ಧಾರ ಕೈಗೊಂಡಿಲ್ಲ. ಇದರಿಂದ ಆ ಭಾಗದ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.