ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರರ ಪಟ್ಟಿ ಪರಿಷ್ಕರಣೆ: ರಾಜ್ಯಕ್ಕೆ ಜಿಲ್ಲೆ ಪ್ರಥಮ

Last Updated 25 ಜನವರಿ 2023, 15:36 IST
ಅಕ್ಷರ ಗಾತ್ರ

ತುಮಕೂರು: ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯವನ್ನು ಅತ್ಯುತ್ತಮವಾಗಿ ನಿರ್ವಹಿಸಿದ ಹಿನ್ನೆಲೆಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ವತಿಯಿಂದ ನೀಡುವ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರಿಗೆ ನೀಡಿ ಗೌರವಿಸಲಾಯಿತು.

ಬೆಂಗಳೂರಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ವಿಧಾನಸಭೆ, ವಿಧಾನ ಪರಿಷತ್ ಮತ್ತು ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಜಿಲ್ಲಾ ಮಟ್ಟದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ಸಂಪೂರ್ಣ ಜವಾಬ್ದಾರಿ ಜಿಲ್ಲಾ ಚುನಾವಣಾಧಿಕಾರಿಯದ್ದೇ ಆಗಿರುತ್ತದೆ. 2022ರಲ್ಲಿ ನಡೆದ ಚುನಾವಣೆಗಳು, ಮತದಾರರ ಪಟ್ಟಿ ಪರಿಷ್ಕರಣೆಯಡಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಜಿಲ್ಲಾ ಚುನಾವಣಾಧಿಕಾರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಕೊಡಮಾಡಲಾಗುತ್ತದೆ. ಈ ಎಲ್ಲಾ ಕಾರ್ಯವನ್ನು ಪರಿಗಣಿಸಿ ವೈ.ಎಸ್.ಪಾಟೀಲ ಅವರಿಗೆ ಪ್ರಶಸ್ತಿ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT