ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರಟಗೆರೆ: ಬಿರುಗಾಳಿಗೆ ಉರುಳಿದ ವಿದ್ಯುತ ಕಂಬ, ಮರ

Published 24 ಮೇ 2024, 15:20 IST
Last Updated 24 ಮೇ 2024, 15:20 IST
ಅಕ್ಷರ ಗಾತ್ರ

ಕೊರಟಗೆರೆ: ಪಟ್ಟಣದಲ್ಲಿ ಶುಕ್ರವಾರ ಸಂಜೆ ಬೀಸಿದ ಬಿರುಗಾಳಿಗೆ ವಿದ್ಯುತ್ ಕಂಬ ಸೇರಿದಂತೆ ಮರಗಳು ನೆಲಕ್ಕುರುಳಿವೆ.

ಪಟ್ಟಣ ಸೇರಿದಂತೆ ತಾಲ್ಲೂಕಿನ ಕೆಲವೆಡೆ ಬಿರುಗಾಳಿ ಸಹಿತ ಮಳೆಯಾಗಿದೆ. ಪಟ್ಟಣ ಹೊರವಲಯದ ಹುಲಿಕುಂಟೆ ರಸ್ತೆಯಲ್ಲಿ ಐದು ವಿದ್ಯುತ್ ಕಂಬ, ತೆಂಗಿನ ಮರಗಳು ಉರುಳಿವೆ. ಗಾಳಿಯ ರಭಸಕ್ಕೆ ವಿದ್ಯುತ್ ಕಂಬ, ತಂತಿ ತುಂಡಾಗಿ ಇದ್ದಿದೆ.

ವಿದ್ಯುತ್ ಕಂಬ ಹಾಗೂ ಮರಗಳು ರಸ್ತೆಗೆ ಉರುಳಿದ್ದರಿಂದ ಗೌರಿಬಿದನೂರು ರಸ್ತೆಯಲ್ಲಿ ಕೆಲ ಕಾಲ ಸಂಚಾರ ಅಸ್ತವ್ಯಸ್ಥವಾಗಿತ್ತು. ಸಂಜೆ ಬಿರುಗಾಳಿ, ಗುಡುಗು ಸಹಿತ ಮಳೆಯಾಗಿದೆ. ತಗ್ಗು ಪ್ರದೇಶದ ಜಮೀನುಗಳಲ್ಲಿ ನೀರು ತುಂಬಿಕೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT