ಶನಿವಾರ, ಅಕ್ಟೋಬರ್ 16, 2021
29 °C

ಕ್ಷೇತ್ರ ಅಭಿವೃದ್ಧಿಗೆ ಒತ್ತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಧುಗಿರಿ: ಕ್ಷೇತ್ರವನ್ನು ಅಭಿವೃದ್ಧಿ ಮಾಡುವ ಗುರಿ ಹೊಂದಲಾಗಿದೆ ಎಂದು ಮಧು ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಎನ್. ಮಧು ತಿಳಿಸಿದರು.

ಪಟ್ಟಣದ ವಿನಾಯಕ ನಗರದಲ್ಲಿ ಮುಖಂಡರ ಸಭೆಯಲ್ಲಿ ಮಾತನಾಡಿದರು.

ರಾಜಧಾನಿ ಬೆಂಗಳೂರಿಗೆ ಹತ್ತಿರವಿರುವ ಮಧುಗಿರಿ ಸಾಕಷ್ಟು ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು ಹಲವು ವರ್ಷಗಳು ಕಳೆದರೂ ಕೆಲ ಗ್ರಾಮದಲ್ಲಿ ಉತ್ತಮವಾದ ರಸ್ತೆಗಳು ಹಾಗೂ ಚರಂಡಿಗಳು ಇಲ್ಲದಾಗಿದೆ ಎಂದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಥಳೀಯರಾದ ನನಗೆ ಅವಕಾಶ ನೀಡಬೇಕೆಂದು ಮುಖಂಡರಲ್ಲಿ ಮನವಿ ಮಾಡಿದರು. ಈ ನಿಟ್ಟಿನಲ್ಲಿ ಪ್ರತಿ ಗ್ರಾಮಕ್ಕೂ ಭೇಟಿ ನೀಡಿ ಜನರ ಕಷ್ಟಗಳಿಗೆ ಸ್ಪಂದಿಸುವುದಾಗಿ ತಿಳಿಸಿದರು. 

ಮುಖಂಡರಾದ ಕಾಳೇಗೌಡ, ಕಾರಮರಡಿ ನಾಗೇಶ್, ಕೃಷ್ಣಾಪುರ ಶ್ರೀನಿವಾಸ್, ಶಿವಣ್ಣ, ರಮೇಶ್, ಕೃಷ್ಣನಾಯಕ್, ನಂದೀಶ್  ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು