ಗುರುವಾರ , ಜನವರಿ 27, 2022
27 °C

ಪರಿಶಿಷ್ಟ ಸಮುದಾಯದ ಅಭಿವೃದ್ಧಿಗೆ ಒತ್ತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಧುಗಿರಿ: ‘ಸಮುದಾಯದ ಆರ್ಥಿಕ ಅಭಿವೃದ್ಧಿಯನ್ನು ಬಲಪಡಿಸಲು ಸಂಘಟನೆಯ ಜೊತೆಗೆ ಎಲ್ಲರೂ ಸಾಮೂಹಿಕ ಸಹಭಾಗಿತ್ವಕ್ಕೆ ಮುಂದಾಗಬೇಕು’ ಎಂದು ಮಾದಿಗ ದಂಡೋರ ರಾಜ್ಯ ಉಪಾಧ್ಯಕ್ಷ ತೊಂಡೋಟಿ ರಾಮಾಂಜಿನಪ್ಪ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಮಾದಿಗ ದಂಡೋರ ಒಳ ಮೀಸಲಾತಿ ಹೋರಾಟ ಸಮಿತಿ ಹಾಗೂ ಜೀವಿಕ ಸಂಘಟನೆಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದಸಾಪ ತಾಲ್ಲೂಕು ಅಧ್ಯಕ್ಷ ಡಾ.ಮಹರಾಜು ಮಾತನಾಡಿದರು.

ದಲಿತ ಒಕ್ಕೂಟದ ಅಧ್ಯಕ್ಷ ಜೀವಿಕ ಡಾ.ಸಂಜೀವಮೂರ್ತಿ ಮಾತನಾಡಿದರು. ಮಾದಿಗ ದಂಡೋರ ತಾಲ್ಲೂಕು ಅಧ್ಯಕ್ಷ ತಿಪ್ಪಾಪುರ ಶ್ರೀರಾಮಪ್ಪ, ಜೀವಿಕ ಸಂಘಟನೆಯ ಸಂಚಾಲಕ ಹನುಮಂತರಾಯಪ್ಪ, ಉಪಾಧ್ಯಕ್ಷ ರಮೇಶ್, ಮುಖಂಡರಾದ ಶಿವಣ್ಣ, ಶಿವಕುಮಾರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.