ತುಮಕೂರು: ವಿದ್ಯಾರ್ಥಿ ದೆಸೆಯಲ್ಲಿ ಕಲಿಕೆ ಬಿಟ್ಟು ಬೇರೆ ಆಸೆ ಆಮಿಷಗಳಿಗೆ ಒಳಗಾಗಬಾರದು ಎಂದು ಸಿದ್ಧಗಂಗಾ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಪರಮೇಶ ಅಭಿಪ್ರಾಯಪಟ್ಟರು.

ನಗರದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಜಿಲ್ಲಾ ಘಟಕದಿಂದ ಆಯೋಜಿಸಿದ್ದ ಸಿದ್ಧಗಂಗಾ ಸಂಸ್ಥೆಯ ರಜತ ಮಹೋತ್ಸವ ಸ್ಮರಣಾರ್ಥವಾಗಿ ಗ್ರಾಮೀಣ ಬಡ ಪ್ರತಿಭಾವಂತ ಮೆಡಿಕಲ್, ಎಂಜಿನಿಯರಿಂಗ್ ಹಾಗೂ ದ್ವಿತೀಯ ಪಿ.ಯು.ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಉಚಿತ ಸಿಇಟಿ ಹಾಗೂ ನೀಟ್ ಪರೀಕ್ಷೆಗಳ ತರಬೇತಿ ಶಿಬಿರವನ್ನು ಉದ್ದೇಶಿಸಿ ಮಾತನಾಡಿದರು.

ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಬಿವಿಪಿ ಇಂತಹ ಶಿಬಿರಗಳನ್ನು ಏರ್ಪಡಿಸಿರುವುದು ಶ್ಲಾಘನೀಯ. ಇದರಿಂದ ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದಾರಿದೀಪವಾಗಲಿದ್ದು ಎಲ್ಲರೂ ಸದುಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ತುಮಕೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಸಿಬಂತಿ ಪದ್ಮನಾಭ ಮಾತನಾಡಿ, ‘ವಿದ್ಯಾರ್ಥಿಗಳ ಯಶಸ್ಸಿಗೆ ಈ ತರಬೇತಿ ಸಹಕಾರಿಯಾಗಲಿದೆ. ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳು ಹೆಚ್ಚು ಹಣ ಕೊಟ್ಟು ಸಿಇಟಿ ತರಬೇತಿ ಪಡೆಯಲು ಸಾಧ್ಯವಿಲ್ಲ. ಅಂತವರಿಗೆ ಈ ತರಬೇತಿ ಉತ್ತಮ ಮಾರ್ಗದರ್ಶನ’ ಎಂದು ಅಭಿಪ್ರಾಯಪಟ್ಟರು.

ಶಿಬಿರದಲ್ಲಿ ಸುಮಾರು 30 ಕ್ಕೂ ಹೆಚ್ಚು ಉಪನ್ಯಾಸಕರು 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆ ವೀಣಾ ಹಾಗೂ ವೇದಿಕೆ ಮೇಲೆ ಎಬಿವಿಪಿ ಕಾರ್ಯಕರ್ತರಾದ ಪ್ರೊ.ರವೀಂದ್ರ ಹಾಗೂ ನಂದೀಶ್, ಸಿದ್ದೇಶ್ ಹಾಗೂ ಜಗದೀಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.