ಬಿಸಿಯೂಟ ನೌಕರರ ಮುಷ್ಕರದಲ್ಲಿ ಭಾಗಿಯಾಗಿರುವುದರಿಂದ ವಿದ್ಯಾರ್ಥಿಗಳಿಗೆ ಬಿಸಿಯೂಟ ತೊಂದರೆಯಾಗದಂತೆ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಸೇರಿದಂತೆ ಪೋಷಕರು, ಕೆಲ ಶಾಲೆಗಳಲ್ಲಿ ಆಯಾಗಳು, ಶಿಕ್ಷಕರು ಸೇರಿ ಬಿಸಿಯೂಟ ತಯಾರಿಸುತ್ತಿದ್ದಾರೆ. ಸರ್ಕಾರದ ಸೂಚನೆಯಂತೆ ಹಾಲು ಮತ್ತು ಬಿಸಿಯೂಟದ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ಮಾಡಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬೋರೆಗೌಡ ತಿಳಿಸಿದರು.