ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು | ವಿದ್ಯುತ್ ಗುತ್ತಿಗೆದಾರರ ಮುಷ್ಕರ ಅಂತ್ಯ

Published 14 ಡಿಸೆಂಬರ್ 2023, 7:12 IST
Last Updated 14 ಡಿಸೆಂಬರ್ 2023, 7:12 IST
ಅಕ್ಷರ ಗಾತ್ರ

ತುಮಕೂರು: ಬೇಡಿಕೆಗಳನ್ನು ಈಡೇರಿಸುವುದಾಗಿ ಬೆಸ್ಕಾಂ ಅಧಿಕಾರಿಗಳು ಭರವಸೆ ನೀಡಿದ ಹಿನ್ನೆಲೆಯಲ್ಲಿ ವಿದ್ಯುತ್ ಗುತ್ತಿಗೆದಾರರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಮುಷ್ಕರ ಕೈಬಿಟ್ಟಿದ್ದಾರೆ.

ಪ್ಯಾಕೇಜ್‌ ಬದಲಾಗಿ ತುಂಡುಗುತ್ತಿಗೆ ನೀಡಬೇಕು. ಬಾಕಿ ಬಿಲ್‌ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಗುತ್ತಿಗೆದಾರರು ಡಿ. 11ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದರು.

ಬೆಸ್ಕಾಂ ಮುಖ್ಯ ಎಂಜಿನಿಯರ್ ಗುತ್ತಿಗೆದಾರರ ಜತೆ ಚರ್ಚಿಸಿ ನಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದು, ಈ ಸಂಬಂಧ ಸುತ್ತೋಲೆ ಹೊರಡಿಸಿದ್ದಾರೆ. ಹಾಗಾಗಿ ಮುಷ್ಕರ ಸ್ಥಗಿತಗೊಳಿಸಲಾಗಿದೆ ಎಂದು ಸಂಘದ ಗೌರವ ಅಧ್ಯಕ್ಷ ಬಿ.ಕೆ.ಅಶೋಕ್ ಕುಮಾರ್, ಗೌರವ ಕಾರ್ಯದರ್ಶಿ ಜಿ.ನಾಗರಾಜು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT