ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಧನ ಉಳಿತಾಯ ಜಾಗೃತಿ ಜಾಥಾ

Last Updated 19 ಡಿಸೆಂಬರ್ 2020, 3:59 IST
ಅಕ್ಷರ ಗಾತ್ರ

ತುಮಕೂರು: ನಗರದ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯ, ರಾಜ್ಯ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಇಂಧನ ಉಳಿತಾಯ ಸಪ್ತಾಹದ ಅಂಗವಾಗಿ ವಿದ್ಯಾರ್ಥಿಗಳು ಶುಕ್ರವಾರ ಜಾಥಾ ನಡೆಸಿದರು.

ಎಸ್‌ಎಸ್‌ಐಟಿ ಕ್ಯಾಂಪಸ್‌ನಿಂದ ಟೌನ್‌ಹಾಲ್ ವರೆಗೆ ಜಾಥಾ ನಡೆಯಿತು. ಜಾಥಾಗೆ ಪ್ರಾಂಶುಪಾಲ ಡಾ.ಎಂ.ಎಸ್.ರವಿಪ್ರಕಾಶ್ ಚಾಲನೆ ನೀಡಿದರು. ಅಮೂಲ್ಯವಾದ ಇಂಧನ ಸಂಪನ್ಮೂಲ ಉಳಿತಾಯ ಮಾಡಬೇಕು. ಮರುಬಳಕೆ ಬಗ್ಗೆ ಅರಿವು ಮೂಡಿಸಬೇಕು ಎಂದು ಸಲಹೆ ಮಾಡಿದರು.

‘ಸಾಹೆ’ ವಿಶ್ವವಿದ್ಯಾಲಯ ಕುಲಸಚಿವ ಡಾ.ಎಂ.ಝಡ್.ಕುರಿಯನ್, ಅನವಶ್ಯಕವಾಗಿ ವಿದ್ಯುತ್ ವ್ಯರ್ಥಮಾಡುವುದನ್ನು ಸ್ವಪ್ರೇರಣೆಯಿಂದ ತಡೆಗಟ್ಟಬೇಬೇಕು ಎಂದರು.

ವಿದ್ಯಾರ್ಥಿ ಮುಸ್ಕಾನ್, ರೇವತಿ ಮಾತನಾಡಿದರು. ವಿದ್ಯುತ್ ಹಾಗೂ ವಿದ್ಯುನ್ಮಾನ ವಿಭಾಗದ ಮುಖ್ಯಸ್ಥ ಡಾ.ಎಲ್.ಸಂಜೀವ್ ಕುಮಾರ್, ಪದವಿ ಕಾಲೇಜು ಪ್ರಾಂಶುಪಾಲ ಡಾ.ಕೆ.ವಿ.ಕುಮಾರ್, ಮಾಧ್ಯಮ ಕೇಂದ್ರದ ನಿರ್ದೇಶಕ ಡಾ.ಬಿ.ಟಿ.ಮುದ್ದೇಶ್, ಐಟಿಐ ಕಾಲೇಜು ಪ್ರಾಂಶುಪಾಲ ಪ್ರೊ.ಟಿ.ಎಸ್.ಬಸವರಾಜು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT