ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು | ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿ: ನಾಲ್ವರು ಕಾನ್‌ಸ್ಟೆಬಲ್‌ ಅಮಾನತು

ಎಸ್‌ಪಿ ಕಚೇರಿ ಸಿಬ್ಬಂದಿಯೂ ಅಮಾನತು
Published 10 ಜೂನ್ 2024, 14:18 IST
Last Updated 10 ಜೂನ್ 2024, 14:18 IST
ಅಕ್ಷರ ಗಾತ್ರ

ತುಮಕೂರು: ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ, ಬಲವಂತವಾಗಿ ಹಣ ಕಸಿದುಕೊಂಡ ಆರೋಪಿ ಮಂಜುನಾಥರೆಡ್ಡಿ ಜತೆಗೆ ಸಂಪರ್ಕದಲ್ಲಿದ್ದ, ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಆರೋಪದ ಮೇಲೆ ನಗರದ ವಿವಿಧ ಪೊಲೀಸ್ ಠಾಣೆಯ ನಾಲ್ವರು ಕಾನ್‌ಸ್ಟೆಬಲ್‌ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಸಿಬ್ಬಂದಿಯೊಬ್ಬರನ್ನು ಅಮಾನತು ಮಾಡಲಾಗಿದೆ.

ನಗರದ ಸಂಚಾರ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ರಾಮಕೃಷ್ಣ, ಊರ್ಡಿಗೆರೆ ಉಪಠಾಣೆ ಹೆಡ್‌ ಕಾನ್‌ಸ್ಟೆಬಲ್‌ ಅಹೋಬಲಯ್ಯ, ಜಯನಗರ ಠಾಣೆಯ ಕಾನ್‌ಸ್ಟೆಬಲ್‌ಲ್ ಮನು, ಕ್ಯಾತ್ಸಂದ್ರ ಠಾಣೆ ಕಾನ್‌ಸ್ಟೆಬಲ್‌ ಮಂಜುನಾಥ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಸಿಬ್ಬಂದಿ ಸುರೇಶ್ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಆದೇಶಿಸಿದ್ದಾರೆ.

ಇಲಾಖೆ ಹಂತದಲ್ಲಿ ವಿಚಾರಣೆ ನಡೆಯುತ್ತಿದೆ. ಆರೋಪಿಗಳು ಹಾಗೂ ಇತರೆ ಅಪರಾಧಿಗಳ ಜತೆಗೆ ಹೊಂದಿರುವ ಸಂಪರ್ಕದ ಬಗ್ಗೆಯೂ ತನಿಖೆ ಮಾಡಲಾಗುತ್ತದೆ. ಒಂದು ವೇಳೆ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದು ಕಂಡು ಬಂದರೆ ಅಮಾನತುಗೊಂಡಿರುವ ಪೊಲೀಸರ ವಿರುದ್ಧವೂ ಕ್ರಿಮಿನಲ್ ಪ್ರಕರಣ ದಾಖಲಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ವ್ಯಪಾರಿಯೊಬ್ಬರಿಗೆ ಕೊಲೆ ಬೆದರಿಕೆ ಹಾಕಿ, ಹಲ್ಲೆ ನಡೆಸಿ, ₹40 ಸಾವಿರ ಹಣ ಕಿತ್ತುಕೊಂಡ ಆರೋಪದ ಮೇರೆಗೆ ಉದ್ಯಮಿ ಮಂಜುನಾಥರೆಡ್ಡಿ ಇತರರ ವಿರುದ್ಧ ತಿಲಕ್ ಪಾರ್ಕ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ಸಮಯದಲ್ಲಿ ಕೆಲವು ಪೊಲೀಸ್ ಸಿಬ್ಬಂದಿ ಪಾತ್ರವೂ ಇರುವುದು ಗೊತ್ತಾಗಿದೆ. ಹಾಗಾಗಿ ಅಮಾನತು ಮಾಡಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT