ತುರುವೇಕೆರೆ: ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಸೀಮಿತರಾಗದೆ ಕ್ರೀಡೆ, ಸಂಗೀತ, ಸಾಹಿತ್ಯದಂತಹ ಹಲವು ಸೃಜನಶೀಲ ಕಲೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ನೊಣವಿನಕರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ದೇಶಿಕೇಂದ್ರ ಶಿವಯೋಗಿಶ್ವರ ಸ್ವಾಮೀಜಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಪಟ್ಟಣದ ಹೊರಪೇಟೆ ಶಿವಯೋಗಿಶ್ವರ ಕಲ್ಯಾಣ ಮಂಟಪದ ಆವರಣದಲ್ಲಿ ಗುರುವಾರ ಇಂಡಿಯನ್ ಪಬ್ಲಿಕ್ ಶಾಲೆಯಿಂದ ಆಯೋಜಿಸದ್ದ ಐಪಿಎಸ್ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಿಕ್ಷಣದಲ್ಲಿ ಅಪೂರ್ವ ಸಾಧನೆಗೈದ ವಿದ್ಯಾರ್ಥಿಗಳನ್ನು ಮಾದರಿಯಾಗಿಟ್ಟು ವಿದ್ಯಾರ್ಥಿಗಳು ಓದು, ಅಧ್ಯಯನ ಮಾಡಿ ಶಾಲೆ, ಶಿಕ್ಷಕರು ಮತ್ತು ಹುಟ್ಟೂರು ಮೆಚ್ಚುವಂತಹ ಮಕ್ಕಳಾಗಿ ಬೆಳೆಯಬೇಕು ಎಂದರು.

ಹಾಲಪ್ಪ ಪ್ರತಿಷ್ಠಾನದ ಸಂಸ್ಥಾಪಕ ಮುರಳೀದರ ಹಾಲಪ್ಪ ಮಾತನಾಡಿ, ಈ ಶಾಲೆಯ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಉತ್ತಮ ಸಾಧಕರಾಗಿ ಹೊರಹೊಮ್ಮುತ್ತಿದ್ದಾರೆ. ಈಗಾಗಲೇ ಕಬ್ಬಡಿ, ಕ್ರಿಕ್ರೆಟ್ನಲ್ಲಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ ಎಂದರು.

ಇಂಡಿಯನ್ ಪಬ್ಲಿಕ್ ಶಾಲೆ ಕಾರ್ಯದರ್ಶಿ ರುದ್ರಯ್ಯ ಹಿರೇಮಠ ಮಾತನಾಡಿದರು.

ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಕಾರ್ಯಕ್ರಮದಲ್ಲಿ ಪಿಎಸ್ಐ ಸಂಗಮೇಶ ಮೇಟಿ, ಇಂಡಿಯನ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಪುಷ್ಪ ಎಸ್.ಪಾಟೀಲ, ಮುಖ್ಯ ಶಿಕ್ಷಕರಾದ ಶಶಿಕಲ ಹಿರೇಮಠ, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.