ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಣ್ಣು ಮಕ್ಕಳಿಗೆ ಸಮಾನ ಅವಕಾಶ: ರಾಘವೇಂದ್ರ ಶೆಟ್ಟಿಗಾರ್ ಸಲಹೆ

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ರಾಘವೇಂದ್ರ ಶೆಟ್ಟಿಗಾರ್ ಸಲಹೆ
Last Updated 25 ಜನವರಿ 2021, 0:58 IST
ಅಕ್ಷರ ಗಾತ್ರ

ತುಮಕೂರು: ಸಂವಿಧಾನದ ಪ್ರಕಾರ ಸಮಾಜದ ಎಲ್ಲರಿಗೂ ಸಮಾನ ಅವಕಾಶಗಳು, ಹಕ್ಕುಗಳು ಇವೆ. ಹೀಗಿದ್ದರೂ ಹೆಣ್ಣು-ಗಂಡು ಎನ್ನುವ ಅಸಮಾನತೆ, ತಾರತಮ್ಯ ಇಂದಿಗೂ ಜೀವಂತವಾಗಿದೆ. ಈ ಅಸಮಾನತೆ ತೊಡೆಯಲು ಹೆಣ್ಣು ಮಕ್ಕಳಿಗೆ ‍ಪೋಷಕರು ಶಿಕ್ಷಣ ಕೊಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಘವೇಂದ್ರ ಶೆಟ್ಟಿಗಾರ್ ಸಲಹೆ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಗರದ ಬಾಲಕಿಯರ ಸರ್ಕಾರಿ ಬಾಲ ಮಂದಿರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಸಮಾನತೆ ಹೋಗಲಾಡಿಸಿ ಸಮಾನತೆಯ ಸಮಾಜ ನಿರ್ಮಾಣದ ದೃಷ್ಟಿಯಿಂದ ಈ ದಿನಾಚರಣೆ ಆಚರಿಸಲಾಗುತ್ತಿದೆ. ಹೆಣ್ಣು ಮಕ್ಕಳನ್ನು ರಕ್ಷಿಸಿ ಗೌರವಯುತವಾಗಿ ಬದುಕಲು ಅವಕಾಶ ನೀಡಬೇಕು ಎಂದು ಹೇಳಿದರು.

ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹಿಮಾ, ಭ್ರೂಣದಿಂದ ಗೋರಿಯವರೆಗೂ ಹೆಣ್ಣಿನ ಬಗ್ಗೆ ತಾರತಮ್ಯ ನಡೆಯುತ್ತಲೇ ಇದೆ. ಹುಟ್ಟುವ ಮಗು ಹೆಣ್ಣೆಂದು ತಿಳಿದರೆ ಭ್ರೂಣ ಹತ್ಯೆ ಮಾಡುವರು. ಹೆಣ್ಣುಮಕ್ಕಳು ಜೀವನದಲ್ಲಿ ನಿರ್ದಿಷ್ಟವಾದ ಗುರಿ ಇಟ್ಟುಕೊಂಡು ಸಾಧನೆ ಮಾಡುವ ಮೂಲಕ ಯಾರಿಗೂ ಕಡಿಮೆ ಇಲ್ಲ ಎಂದು ತೋರಿಸಬೇಕು ಎಂದು ತಿಳಿಸಿದರು.

ಅಧ್ಯಕ್ಷತೆವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್ ನಟರಾಜ್, ಹೆಣ್ಣು ಮಕ್ಕಳು ಮತ್ತು ಮಹಿಳೆಯರ ಅಭಿವೃದ್ಧಿಗಾಗಿ ಇಲಾಖೆಯಲ್ಲಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೀಕ್ಷಕಿ ಜಾಹ್ನವಿ ಸ್ವಾಗತಿಸಿದರು. ಶಾಂತಾ ನಿರೂಪಿಸಿದರು. ದಿವ್ಯಾ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT