ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗವಿಕಲರಿಗೂ ಸಮಾನ ಅವಕಾಶ

Last Updated 5 ಡಿಸೆಂಬರ್ 2020, 3:32 IST
ಅಕ್ಷರ ಗಾತ್ರ

ತುಮಕೂರು: ಅಂಗವಿಕಲರಲ್ಲಿರುವ ಧೈರ್ಯ, ಪ್ರತಿಕೂಲ ಪರಿಸ್ಥಿತಿ ಎದುರಿಸಿ ಪುಟಿದೇಳುವ ಅವರ ಗುಣ ನಮಗೆ ಸದಾ ಸ್ಫೂರ್ತಿ. ಅಂಗವಿಕಲರ ಬದುಕನ್ನು ಹಸನುಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದರು.

ನಗರದ ‌ಜಿಲ್ಲಾ ಬಾಲಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಅಂಗವಿಕಲರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರಲು, ಅವರಿಗೂ ಸಮಾನ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಟಿ.ಎ.ವೀರಭದ್ರಯ್ಯ, ‘ಅಂಗವಿಕಲರ ಪ್ರಮಾಣ ಪತ್ರ ಪಡೆಯಲು ಹಲವು ಮಂದಿ ಜಿಲ್ಲಾಸ್ಪತ್ರೆಗೆ ಬರುತ್ತಾರೆ. ಅಂಗವಿಕಲರು ಮಧ್ಯವರ್ತಿಗಳ ಮೂಲಕ ಹೋಗದೆ ನೇರವಾಗಿ ವೈದ್ಯರನ್ನು ಭೇಟಿ ಮಾಡಿ ಪ್ರಮಾಣಪತ್ರ ಪಡೆದುಕೊಳ್ಳಿ’ ಎಂದು ಸಲಹೆ ನೀಡಿದರು.

ಜಿಲ್ಲಾ ಆಸ್ಪತ್ರೆ ಆವರಣದಲ್ಲಿರುವ ಅಂಗವಿಕಲರ ಪುನಃಶ್ಚೇತನ ಕೇಂದ್ರ ಸ್ಥಗಿತಗೊಂಡಿದೆ. ಅದನ್ನು ಮತ್ತೆ ಪುನಃಶ್ಚೇತನಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒಗೆ ಮನವಿ ಮಾಡಿದರು.

ಜಿ.ಪಂ ಉಪಕಾರ್ಯದರ್ಶಿ ರಮೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ನಟರಾಜು ಮಾತನಾಡಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಅಂಗವಿಕಲರಾದ ಕೆ.ಆರ್.ವೀರಭದ್ರಯ್ಯ, ಸಿ.ದರ್ಶನ್, ಎಂ.ನಂದಿನಿ, ಬಸಪ್ಪ ಮಂಗಸುಳಿ, ಮೊಹಮ್ಮದ್ ಮುಜಾಹಿದ್, ಗೋಪಾಲಪ್ಪ, ನಾಗೇಶ್‍ಕುಮಾರ್, ಸೀತಮ್ಮ ಅವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಎಂ.ರಮೇಶ್, ಶಿರಾ ತಾ.ಪಂ ವಿವಿಧೋದ್ದೇಶ ‌‌ಪುನರ್ವಸತಿ ಕಾರ್ಯಕರ್ತ ಚಿತ್ತಯ್ಯ, ಧನಂಜಯ್ಯ, ಶಿವಕುಮಾರ್, ಶಾರದಮ್ಮ, ಸುಧೀಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT