ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರೈಲ್ವೆ ಪ್ರಯಾಣಿಕರ ವೇದಿಕೆಯ ದಶಮಾನೋತ್ಸವ: ಪ್ರಬಂಧ, ಚಿತ್ರಕಲೆ ಸ್ಪರ್ಧೆ

Published 24 ಜೂನ್ 2024, 6:56 IST
Last Updated 24 ಜೂನ್ 2024, 6:56 IST
ಅಕ್ಷರ ಗಾತ್ರ

ತುಮಕೂರು: ರೈಲ್ವೆ ಪ್ರಯಾಣಿಕರ ವೇದಿಕೆಯ ದಶಮಾನೋತ್ಸವ ಪ್ರಯುಕ್ತ ನಗರದಲ್ಲಿ ಭಾನುವಾರ ಪ್ರಬಂಧ ಮತ್ತು ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿತ್ತು.

ರೈಲಿನ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧೆ ಏರ್ಪಡಿಸಲಾಗಿತ್ತು. ನಗರ ವ್ಯಾಪ್ತಿಯ ವಿವಿಧ ಶಾಲೆಗಳಿಂದ ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಉತ್ಸಾಹದಿಂದಲೇ ಸ್ಪರ್ಧೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಸ್ಪರ್ಧೆಯ ನಂತರ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

‘ರೈಲು ಪ್ರಯಾಣದ ಅನುಭವ ಮತ್ತು ಪ್ರಯಾಣದಲ್ಲಿ ಸುರಕ್ಷತೆ’ ವಿಷಯವಾಗಿ ಪ್ರಬಂಧ ಬರೆದರು. ‘ನನ್ನ ರೈಲು’ ವಿಷಯವಾಗಿ ಹಲವು ಚಿತ್ರಗಳನ್ನು ಬಿಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT