ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಂಗು ಟೆಕ್ನಾಲಜಿ ಪಾರ್ಕ್ ಸ್ಥಾಪಿಸಿ: ಕೆ.ಎಸ್. ಸದಾಶಿವಯ್ಯ

Last Updated 30 ಮಾರ್ಚ್ 2021, 5:53 IST
ಅಕ್ಷರ ಗಾತ್ರ

ತಿಪಟೂರು: ತಾಲ್ಲೂಕಿನ ಜನರ ಜೀವನಾಧಾರ ಬೆಳೆ ತೆಂಗಿಗೆ ಉತ್ತಮ ಬೇಡಿಕೆ ಸೃಷ್ಟಿಯಾಗುವ ಹಿನ್ನೆಲೆಯಲ್ಲಿ ಹಾಗೂ ಸ್ಥಳೀಯವಾಗಿ ಉತ್ತಮ ಉದ್ಯೋಗಾವಕಾಶ ದೊರೆಯುವ ದೃಷ್ಟಿಯಿಂದ ತಾಲ್ಲೂಕಿನಲ್ಲಿ ತೆಂಗು ಟೆಕ್ನಾಲಜಿ ಪಾರ್ಕ್‌ ಸ್ಥಾಪಿಸಬೇಕೆಂದು ತಾಲ್ಲೂಕು ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿ ಕೆ.ಎಸ್. ಸದಾಶಿವಯ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಮನವಿ ಮಾಡಿದ್ದಾರೆ.

ತುಮಕೂರು ಜಿಲ್ಲೆ ವ್ಯಾಪ್ತಿಯಲ್ಲಿ 1,76,244 ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯಲಾಗುತ್ತಿದೆ. ಈ ಬಾರಿ ಕೇಂದ್ರ ಸರ್ಕಾರದ ಒಂದು ಜಿಲ್ಲೆ ಒಂದು ಉತ್ಪನ್ನದಡಿ ಜಿಲ್ಲೆಯ ಜನರ ಜೀವನಾಧಾರ ಬೆಳೆ ತೆಂಗು ಉತ್ಪನ್ನವನ್ನು ಜಿಲ್ಲೆಯ ಉತ್ಪನ್ನವಾಗಿ ಆಯ್ಕೆ ಮಾಡಿದ್ದಾರೆ. ಆದ್ದರಿಂದ ತೆಂಗು ಬೆಳೆಗಾರರ ಆರ್ಥಿಕ ಸಬಲೀಕರಣದ ದೃಷ್ಟಿಯಿಂದ ಸ್ಥಳೀಯವಾಗಿ ಬೆಳೆಯುವ ತೆಂಗನ್ನು ಬಳಸಿಕೊಂಡು ತಂತ್ರಜ್ಞಾನ ಬಳಸಿ ನಾನಾ ಬಗೆಯ ಉತ್ಪನ್ನಗಳನ್ನು ತಯಾರಿಸುವ ಘಟಕ ಸ್ಥಾಪನೆ ಮಾಡಬೇಕು. ತೆಂಗಿಗೆ ಉತ್ತಮ ಬೇಡಿಕೆ ಸೃಷ್ಟಿಸುವುದು ಮಾತ್ರವಲ್ಲದೇ ಪರೋಕ್ಷವಾಗಿ ಸರ್ಕಾರ ತೆಂಗು ಬೆಳೆ ಬೆಳೆಯಲು ಪ್ರೊತ್ಸಾಹ ನೀಡಿದಂತಾಗುತ್ತದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT