ಗುರುವಾರ , ಜೂನ್ 17, 2021
21 °C

ಎಲ್ಲ ಆಸ್ಪತ್ರೆಗಳಲ್ಲಿಯೂ ಐಸೋಲೇಷನ್ ವಾರ್ಡ್ ಸ್ಥಾಪಿಸಿ: ಜೆ.ಸಿ.ಮಾಧುಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಕೊರೊನಾ 3ನೇ ಹಂತದ ಹರಡುವಿಕೆಯು ಬಹಳ ತೀವ್ರವಾಗಿರುತ್ತದೆ. ಸೋಂಕಿನ ವೇಗ ತಡೆಯಲು ಎಲ್ಲ ರೀತಿಯ ಮುಂಜಾಗ್ರತಾ ಕ್ರಮವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೊರೊನಾ ಸೋಂಕು ಕುರಿತು ನಡೆದ ಮುಂಜಾಗ್ರತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಸೋಂಕಿತ ವ್ಯಕ್ತಿಗೆ ಪ್ರಥಮ ಹಂತದಲ್ಲಿ ಸಮೀಪವಿರುವ ಕುಟುಂಬಸ್ಥರು, ಬಂಧುಗಳು ಹಾಗೂ 2ನೇ ಹಂತದಲ್ಲಿ ಅವರ ನಿಕಟವರ್ತಿಗಳಿಗೆ ಹರಡುವ ಸಾಧ್ಯತೆ ಇದೆ. 3ನೇ ಹಂತದಲ್ಲಿ ಅವರು ಓಡಾಡಿರುವ, ಸಂಪರ್ಕದಲ್ಲಿರುವ ಎಲ್ಲ ಪ್ರದೇಶಗಳ ವ್ಯಕ್ತಿಗಳಿಗೆ ತೀವ್ರವಾಗಿ ಹಾಗೂ ವಿಶಾಲವ್ಯಾಪ್ತಿಯಲ್ಲಿ ಸೋಂಕು ಹರಡುವುದರಿಂದ ಮಾರ್ಚ್ 31 ರವರೆಗೆ ತೀವ್ರ ನಿಗಾವಹಿಸಬೇಕು ಎಂದರು.

ಸರ್ಕಾರಿ ಕಚೇರಿಗಳಿಗೆ ನಿಗದಿತ ಅವಧಿಯಲ್ಲಿ ಮಾತ್ರ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗಾಗಿ ಭೇಟಿ ನೀಡಬೇಕು ಎಂದು ಸಚಿವರು ತಿಳಿಸಿದರು.

ಜಿಲ್ಲೆಯ ಎಲ್ಲ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಐಸೋಲೇಷನ್ ವಾರ್ಡ್‍ಗಳನ್ನು ಸ್ಥಾಪಿಸುವಂತೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿಯೂ ಸಹ ಇದೇ ಕ್ರಮ ಅನುಸರಿಸುವಂತೆ ನಿರ್ದೇಶನ ನೀಡಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಈ ವ್ಯವಸ್ಥೆ ಕಲ್ಪಿಸಲು ಅವಕಾಶವಿಲ್ಲದ ಗ್ರಾಮೀಣ ಭಾಗದಲ್ಲಿ ಖಾಸಗಿ ಮನೆಗಳನ್ನು ಸಹ ಪಡೆದು ಐಸೋಲೇಷನ್ ವಾರ್ಡ್‍ಗಳಾಗಿ ಪರಿವರ್ತಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಿಕಾ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಉಪವಿಭಾಗಾಧಿಕಾರಿ ಅಜಯ್ ಹಾಗೂ ಜಿಲ್ಲಾ ಆಸ್ಪತ್ರೆ ಶಸ್ತ್ರ ಚಿಕಿತ್ಸಕ ಡಾ.ವೀರಭದ್ರಯ್ಯ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು