ತುಮಕೂರು: ಆಗಸ್ಟ್ ತಿಂಗಳ ಒಳಗೆ ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆಯ ಕೆಲಸ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಅಧಿಕಾರಿಗಳ ಜತೆ ಸಭೆ ನಡೆಸಿದರು.

ಎತ್ತಿನಹೊಳೆ ಯೋಜನೆಗಾಗಿ ಈವರೆಗೂ 2,679 ಎಕರೆ ಭೂಸ್ವಾಧೀನವಾಗಿದೆ. ಉಳಿದ 438 ಎಕರೆ ಭೂಮಿಯನ್ನು 4 ತಿಂಗಳಲ್ಲಿ ಸ್ವಾಧೀನ ಪಡಿಸಿಕೊಳ್ಳಬೇಕು. ತುಮಕೂರು-ರಾಯದುರ್ಗ ಯೋಜನೆಗಾಗಿ 1,361 ಎಕರೆಯನ್ನು ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗಿದೆ. ಬಾಕಿ 35 ಎಕರೆ ಭೂಸ್ವಾಧೀನ ಪ್ರಕ್ರಿಯೆ 45 ದಿನದಲ್ಲಿ ಪೂರ್ಣಗೊಳಿಸಬೇಕು ಎಂದು ನಿರ್ದೇಶಿಸಿದರು.

ವಿಶೇಷ ಭೂಸ್ವಾಧೀನಾಧಿಕಾರಿ ರೇಣುಕಾ ಪ್ರಸಾದ್ ಜಂಬಗಿ, ‘ತುಮಕೂರು-ದಾವಣಗೆರೆ ರೈಲ್ವೆ ಯೋಜನೆಗೆ 770 ಎಕರೆ ಭೂಮಿ ಹಸ್ತಾಂತರಿಸಲಾಗಿದೆ. ಶಿರಾ ಮತ್ತು ತುಮಕೂರು ತಾಲ್ಲೂಕಿನಲ್ಲಿ 61 ಎಕರೆ ಭೂಮಿ ಸ್ವಾಧೀನ ಆಗಬೇಕಿದೆ. ಇದಕ್ಕಾಗಿ ₹20 ಕೋಟಿ ಅನುದಾನದ ಅವಶ್ಯಕತೆಯಿದೆ’ ಎಂದು ತಿಳಿಸಿದರು.

ಭದ್ರಾ ಮೇಲ್ದಂಡೆ ಯೋಜನೆಯ ಕಾರ್ಯನಿರ್ವಾಹಕ ಎಂಜಿನಿಯರ್ ಸಂದೇಶ್, ‘ಯೋಜನೆಗಾಗಿ ಸ್ವಾಧೀನ ಪಡಿಸಿಕೊಂಡ 308 ಎಕರೆ ಭೂ ಮಾಲೀಕರಿಗೆ ಪರಿಹಾರ ನೀಡುವ ಕಾರ್ಯ ಪ್ರಗತಿಯಲ್ಲಿದೆ’ ಎಂದರು.

ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿಗಳಾದ ಗೋಟೂರು ಶಿವಪ್ಪ, ಗೌರವ್ಕುಮಾರ್ ಶೆಟ್ಟಿ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.