ಬಹುವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ₹9.50 ಕೋಟಿ ವೆಚ್ಚದಲ್ಲಿ ಬಸ್ ನಿಲ್ದಾಣ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆಗಳು ನಡೆದಿದ್ದು ಐದು ಮಂದಿ ಭಾಗಿಯಾಗಿದ್ದಾರೆ ಅಂತಿಮವಾಗಬೇಕಿದೆ.
–ಮಂಜುಳಾ, ಪುರಸಭೆ ಮುಖ್ಯಾಧಿಕಾರಿ
ಚುನಾವಣೆಗಳು ಬಂದಾಗ ಮಾತ್ರ ಅಭಿವೃದ್ಧಿ ಕಾರ್ಯಗಳು ನೆನಪಿಗೆ ಬಂದು ಭರವಸೆ ನೀಡುವ ಶಾಸಕ ಡಾ.ರಂಗನಾಥ್ ಚುನಾವಣೆಯಲ್ಲಿ ಗೆದ್ದ ನಂತರ ಅಭಿವೃದ್ಧಿ ಕಾರ್ಯ ಮರೆಯುತ್ತಾರೆ ಎಂಬುದಕ್ಕೆ ಬಸ್ ನಿಲ್ದಾಣ ಕಾಮಗಾರಿ ಸಾಕ್ಷಿಯಾಗಿದೆ. ಬಸ್ ನಿಲ್ದಾಣ ನೂರಾರು ಮಂದಿಗೆ ಬದುಕು ಕಟ್ಟಿಕೊಟ್ಟಿದೆ. ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣದ ಜತೆಗೆ ಅದನ್ನೇ ನಂಬಿ ಜೀವನ ನಡೆಸುತ್ತಿರುವವರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕಿದೆ.
–ರವಿಚಂದ್ರ ವೈ.ಎಚ್. ಕುಣಿಗಲ್ ಅಭಿವೃದ್ಧಿ ಫೋರಂ ಅಧ್ಯಕ್ಷ
ಬಸ್ ನಿಲ್ದಾಣ ಸಾವಿರಾರು ಪ್ರಯಾಣಿಕರ ಸಂಪರ್ಕ ಕೇಂದ್ರವಾಗಿದ್ದು 20 ವರ್ಷವಾದರೂ ಮರುನಿರ್ಮಾಣಕ್ಕೆ ಕ್ರಮ ತೆಗೆದುಕೊಳ್ಳದಿರುವುದು ಅಭಿವೃದ್ಧಿ ಬಗ್ಗೆ ಮಾತನಾಡುವ ಜನಪ್ರತಿನಿಧಿಗಳು ಆತ್ಮಾಲೋಕನ ಮಾಡಿಕೊಳ್ಳಬೇಕಿದೆ. ಸಂಜೆಯಾದರೆ ಅನೈತಿಕ ಚಟುವಟಿಕೆಗಳ ತಾಣವಾಗುವ ಬಸ್ ನಿಲ್ದಾಣದ ಬಗ್ಗೆ ಯಾರು ಗಮನಹರಿಸುತ್ತಿಲ್ಲ.
–ನಿಖಿಲ್ ಕುಮಾರ್, ನಿಖಿಲ್ ಕುಮಾರಸ್ವಾಮಿ ಸೇವಾ ಸಮಿತಿ ಅಧ್ಯಕ್ಷ