ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲರ ನಿರೀಕ್ಷೆ ಈಡೇರಿಸಲಾಗದು: ಮಾಧುಸ್ವಾಮಿ

ಸಚಿವ ಜೆ.ಸಿ.ಮಾಧುಸ್ವಾಮಿ
Last Updated 8 ಆಗಸ್ಟ್ 2021, 3:47 IST
ಅಕ್ಷರ ಗಾತ್ರ

ತುಮಕೂರು: ಎಲ್ಲರ ನಿರೀಕ್ಷೆಗಳನ್ನು ಈಡೇರಿಸಲು ಸರ್ಕಾರದಿಂದ ಸಾಧ್ಯವಿಲ್ಲ. ಒಂದು ಪರಿಹರಿಸಿದರೆ ಮತ್ತೊಂದು ಹೊಸ ಸಮಸ್ಯೆ ಉದ್ಬವವಾಗುತ್ತಲೇ ಇರುತ್ತದೆ. ಅವುಗಳನ್ನು ಎಚ್ಚರಿಕೆಯಿಂದ ನಿಭಾಯಿಸಬೇಕು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ ಬಿಜೆಪಿ ಕಾರ್ಯಕರ್ತರಿಗೆ ಸಲಹೆ ಮಾಡಿದರು.

ಬಿಜೆಪಿ ನಗರ ಮಂಡಲದ ಕಾರ್ಯಕಾರಿಣಿ ಸಭೆಯನ್ನು ಶನಿವಾರ ಉದ್ಘಾಟಿಸಿ ಮಾತನಾಡಿ, ‘ವಿರೋಧ ಪಕ್ಷಗಳ ಟೀಕೆಗೆ ಉತ್ತರ ನೀಡುವುದಕ್ಕೆ ಕಾರ್ಯಕರ್ತರು ಸೀಮಿತವಾಗಬಾರದು. ಸಂಕಷ್ಟದಲ್ಲಿರುವ ಜನರಿಗೆ ತಮ್ಮ ಕೈಲಾದಷ್ಟು ನೆರವು ನೀಡುವ ಮೂಲಕ ಪಕ್ಷದ ಘನತೆ ಹೆಚ್ಚಿಸುವ ಕೆಲಸ ಮಾಡಬೇಕು’ ಎಂದು ತಿಳಿಸಿದರು.

ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ತಿಳಿಸಬೇಕು. ಸರ್ಕಾರ– ಪಕ್ಷ ಒಟ್ಟಾಗಿ ಸಾಗಬೇಕು. ಪ್ರಧಾನಿಯಾಗಿದ್ದಾಗ ವಾಜಪೇಯಿ ಅತ್ಯುತ್ತಮವಾಗಿ ಕೆಲಸ ಮಾಡಿದ್ದರೂ 2004ರ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಸೋಲಬೇಕಾಯಿತು. ಸರ್ಕಾರದ ಕಾರ್ಯಕ್ರಮಗಳು ಜನರ ನಡುವೆ ಪ್ರಚಾರವಾಗಲಿಲ್ಲ ಎಂದು ಹೇಳಿದರು.

ಶಾಸಕ ಜಿ.ಬಿ.ಜೋತಿಗಣೇಶ್, ‘ಕೋವಿಡ್‌ನಿಂದಾಗಿ ಜನರ ಹೊಟ್ಟೆಪಾಡಿನ ಸ್ಥಿತಿ ಗಂಭೀರವಾಗಿದೆ. ಎರಡನೇ ಅಲೆ ಸಮಯದಲ್ಲಿ ಪಕ್ಷದ ಕಾರ್ಯಕರ್ತರು ಜನರ ಸಂಕಷ್ಟಗಳಿಗೆ ಸ್ಪಂದಿಸಿದರು’ ಎಂದರು.

1950ರಲ್ಲಿ ಜನಸಂಘ ಆರಂಭವಾದಾಗ ಇದ್ದಂತಹಧ್ಯೇಯೋದ್ದೇಶಗಳನ್ನೇ ಇಂದಿಗೂ ಬಿಜೆಪಿ ಮುಂದುವರೆಸಿಕೊಂಡು ಬಂದಿದೆ. ರಾಜ್ಯದಲ್ಲಿ ಇಬ್ಬರು ಶಾಸಕರು ಆಯ್ಕೆಯಾದ ಸನ್ನಿವೇಶದಿಂದ ಹಿಡಿದು, ಅಧಿಕಾರ ಹಿಡಿಯುವ ಮಟ್ಟಕ್ಕೆ ಪಕ್ಷ ಬೆಳೆದು ನಿಂತಿದೆ ಎಂದು ತಿಳಿಸಿದರು.

ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶಿವಪ್ರಸಾದ್, ‘ಪಕ್ಷವನ್ನು ಸದಾ ಜೀವಂತವಾಗಿಡಲು ಇಂತಹ ಕಾರ್ಯಕಾರಿಣಿ ಸಭೆಗಳು ಅನಿವಾರ್ಯ. ಪಕ್ಷ ವಹಿಸಿದ ಜವಾಬ್ದಾರಿಗಳನ್ನು ನಿರ್ಲಕ್ಷ್ಯಿಸಿದರೆ, ಪಕ್ಷ ನಮ್ಮನ್ನು ನಿರ್ಲಕ್ಷ್ಯಿಸುತ್ತದೆ ಎಂಬುದಕ್ಕೆ ನಮ್ಮ ನಡುವೆ ಹಲವಾರು ಉದಾಹರಣೆಗಳಿವೆ’ ಎಂದು ಹೇಳಿದರು.

ತುಮಕೂರು ನಗರ ಮಂಡಲ ಅಧ್ಯಕ್ಷ ಹನುಮಂತರಾಜು ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಉಪಾಧ್ಯಕ್ಷ ಎಂ.ಬಿ.ನಂದೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ.ಮಂಜುನಾಥ್, ದಾವಣಗೆರೆ ಉಪಪ್ರಭಾರ ಲಕ್ಷ್ಮಿಶ್, ಮೇಯರ್ ಬಿ.ಜಿ.ಕೃಷ್ಣಪ್ಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT