ಶನಿವಾರ, ನವೆಂಬರ್ 28, 2020
22 °C

ಬಿಎಸ್‌ವೈ ಬರಿಗೈಯಲ್ಲಿ ಬಂದಿರುವುದು ನಾಯಕತ್ವ ಬದಲಾವಣೆ ಮುನ್ಸೂಚನೆ: ರಾಜಣ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಉತ್ಸಾಹ ತೋರಿ ಬಿಜೆಪಿ ಹೈಕಮಾಂಡ್‍ ಭೇಟಿಯಾದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬರಿಗೈಯಲ್ಲಿ ಮರಳಿದ್ದಾರೆ. ಇದು ಮುಖ್ಯಮಂತ್ರಿ ಬದಲಾವಣೆಯ ಮುನ್ಸೂಚನೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಕೆ.ಎನ್.ರಾಜಣ್ಣ ಹೇಳಿದರು.

ಇದನ್ನು ಓದಿ: ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಸುವ ಅಪೇಕ್ಷೆ ಬಿಜೆಪಿಗೆ ಇಲ್ಲ. ಒಂದು ವೇಳೆ ಇದಿದ್ದರೆ ಅವರು ತೆಗೆದುಕೊಂಡು ಹೋಗಿದ್ದ ಪಟ್ಟಿಗೆ ಅನುಮೋದನೆ ‌ನೀಡುತಿದ್ದರು. ಬಿಜೆಪಿಗೆ ‌ಈಗ ಯಡಿಯೂರಪ್ಪ ಬೇಕಾಗಿಲ್ಲ ಎಂಬುದು ಇದರಿಂದಲೇ ಗೊತ್ತಾಗುತ್ತದೆ ಎಂದರು.

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಯಡಿಯೂರಪ್ಪ ಒಂದು ರಾಜ್ಯವನ್ನು ಪ್ರತಿನಿಧಿಸುವ ವ್ಯಕ್ತಿ. ಕೇವಲ ಐದೇ ಐದು ನಿಮಿಷಗಳ ಭೇಟಿಗೂ ಕೇಂದ್ರ ಗೃಹಸಚಿವರು ಅವಕಾಶ ಕೊಟ್ಟಿಲ್ಲ. ಇದು ಕೇವಲ ಯಡಿಯೂರಪ್ಪ ಅವರಿಗೆ ಮಾಡಿದ ಅಪಮಾನವಲ್ಲ. ಇಡೀ ರಾಜ್ಯಕ್ಕೆ ಮಾಡಿದ ಅಪಮಾನ. ಕರ್ನಾಟಕ ಎಂದರೆ ಬಿಜೆಪಿಗೆ ಅಷ್ಟು ತಾತ್ಸಾರವೇ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗ ಕಾಡುಗೊಲ್ಲ ಅಭಿವೃದ್ಧಿ ನಿಗಮದ ‌ಹೆಸರನ್ನು ಗೊಲ್ಲ ಅಭಿವೃದ್ಧಿ ನಿಗಮ ಎಂದು ಬದಲಿಸುವ ಪ್ರಸ್ತಾಪ ರಾಜ್ಯ ಸರ್ಕಾರದ ಎದುರು ಇದೆ. ನಿಗಮ ಘೋಷಣೆಯಾಗಿ ಒಂದೂವರೆ ‌‌ತಿಂಗಳು ಕಳೆದರೂ ಹಣ ನೀಡಿಲ್ಲ. ಬಿಜೆಪಿಯು ಮತದಾರರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಹಿಂಜರಿದರೆ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು