ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಂಬತ್ತಿ ಮುಂದೆ ಬೈಕ್‌ಗೆ ಪೆಟ್ರೋಲ್ ಸುರಿಯುವಾಗ ಸ್ಫೋಟ: ಯುವತಿ ಸಾವು

Published 10 ಡಿಸೆಂಬರ್ 2023, 13:56 IST
Last Updated 10 ಡಿಸೆಂಬರ್ 2023, 13:56 IST
ಅಕ್ಷರ ಗಾತ್ರ

ಕುಣಿಗಲ್: ಯಡೆಯೂರು ಹೋಬಳಿಯ ಕಟ್ಟಿಗೇಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಮೊಂಬತ್ತಿ ಬೆಳಕಿನಲ್ಲಿ ಬೈಕ್‌ಗೆ ಪೆಟ್ರೋಲ್ ಹಾಕುವಾಗ ಪೆಟ್ರೊಲ್‌ ಬಾಟಲ್‌ ಕೈತಪ್ಪಿ ಸ್ಫೋಟಗೊಂಡ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಸೌಂದರ್ಯ (16) ಭಾನುವಾರ ಮೃತಪಟ್ಟಿದ್ದಾರೆ. 

ಗ್ರಾಮದ ಲಕ್ಷ್ಮಣರವರ ಮಗಳು ಸೌಂದರ್ಯ ಪಟ್ಟಣದ ಮಹಾತ್ಮ ಗಾಂಧಿ ಪದವಿ ಪೂರ್ವ ಕಾಲೇಜಿನಲ್ಲಿ ಹತ್ತನೇ ತರಗತಿ ಓದುತ್ತಿದ್ದರು.

ಶುಕ್ರವಾರ ರಾತ್ರಿ ಮನೆಯ ಅಂಗಡಿಯಲ್ಲಿ ವಿದ್ಯುತ್ ಇಲ್ಲದಾಗ ಮೊಂಬತ್ತಿ ಹಚ್ಚಿ ಇಡಲಾಗಿತ್ತು. ಎದುರಿನಲ್ಲಿಯೇ ಬೈಕ್‌ಗೆ ಪೆಟ್ರೋಲ್ ಹಾಕುವಾಗ ತಕ್ಷಣ ವಿದ್ಯುತ್ ಬಂದಾಗ ಗಾಬರಿಗೊಂಡ ಸೌಂದರ್ಯ ಪೆಟ್ರೋಲ್ ಬಾಟಲಿ ಕೈ ಬಿಟ್ಟ ಕಾರಣ ಪೆಟ್ರೋಲ್ ಚೆಲ್ಲಿ ಮೇಣದಬತ್ತಿಯ ಕಿಡಿಯಿಂದ ಬೆಂಕಿ ಹತ್ತಿಕೊಂಡು ಅಂಗಡಿ ಸಾಮಗ್ರಿ ಆಹುತಿಯಾಗಿತ್ತು. ಗಾಯಗೊಂಡಿದ್ದ ಸಾಂದರ್ಯ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ಅಮೃತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT