ಕೊಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲಿ ನೂತನ ಆಸ್ಪತ್ರೆ ನಿರ್ಮಿಸಲು ಮುಂದಾಗುವುದಕ್ಕಿಂತ ಇರುವ ಆಸ್ಪತ್ರೆಗೆ ಶಕ್ತಿ ತುಂಬಿದಾಗ ಅಲ್ಲಿನ ಬಡ ಜನರಿಗೆ ಅನುಕೂಲವಾಗುತ್ತದೆ ಎಂದು ಪಾವಗಡದ ಸ್ವಾಮಿ ಜಪಾನಂದ ಜಿ ತಿಳಿಸಿದರು.

ಪಟ್ಟಣದಲ್ಲಿನ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಶನಿವಾರ ಇನ್ಫೊಸಿಸ್ ಸಹಕಾರದೊಂದಿಗೆ ಪಾವಗಡದ ಶಾರದಾದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಶಾರದಾದೇವಿ ಸಂಚಾರಿ ಕಣ್ಣಿನ ಆಸ್ಪತ್ರೆ, ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರದ ಸಹಕಾರದೊಂದಿಗೆ ನಡೆದ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ಗಡಿಭಾಗದ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿ ಅಲ್ಲಿಗೆ ಬೇಕಾದ ಸೌಲಭ್ಯ ಕಲ್ಪಿಸಿದರೆ ಅಲ್ಲಿನ ಬಡಜನರಿಗೆ ಅನುಕೂಲವಾಗಲಿದೆ ಎಂದರು.

ಮುಂದಿನ ದಿನಗಳಲ್ಲಿ ಶಾಲೆಗಳಲ್ಲಿನ ಮಕ್ಕಳಿಗೆ ಕಣ್ಣಿನ ಉಚಿತ ತಪಾಸಣೆ ಜೊತೆಗೆ ಉಚಿತವಾಗಿ ಕನ್ನಡಕ ನೀಡಲು ಕೊಡಿಗೇನಹಳ್ಳಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು ಎಂದರು.

ಇನ್ಫೊಸಿಸ್ ಪ್ರೋಗ್ರಾಮ್ ಮ್ಯಾನೇಜರ್ ಮಹೇಶ್ ಕುಮಾರ್, ಡಾ.ಸ್ವಾತಿ, ಡಾ.ದರ್ಶನ್ ಮಾರೇಗೌಡ, ಲಿಖಿತ, ಶಾರದಾ ಆಸ್ಪತ್ರೆ ಸಿಬ್ಬಂದಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.