ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಪೊರೇಟ್‌ ಕಂಪನಿಗೆ ಕೃಷಿ ಕಾಯ್ದೆ ಅನುಕೂಲ: ದೇವರಾಜು ತಿಮ್ಲಾಪುರ

Last Updated 28 ಸೆಪ್ಟೆಂಬರ್ 2021, 3:24 IST
ಅಕ್ಷರ ಗಾತ್ರ

ತಿಪಟೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೃಷಿ ಕಾಯ್ದೆಗಳ ತಿದ್ದುಪಡಿ ವಾಪಸ್‌ ಪಡೆಯುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸೋಮವಾರ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದ್ದ ಭಾರತ್ ಬಂದ್‍ಗೆ ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.

ಗ್ರಾಮದೇವತೆ ಕೆಂಪಮ್ಮದೇವಿ ದೇವಾಲಯದಿಂದ ಮಿನಿ ವಿಧಾನಸೌಧದವರೆಗೆ ಬಂದ್‍ ಅಂಗವಾಗಿ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು. ಬಂದ್‍ಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಕೆಲವು ಅಂಗಡಿಗಳು ಸ್ವಯಂ ಬಾಗಿಲು ಹಾಕಿ ಬೆಂಬಲ ವ್ಯಕ್ತಪಡಿಸಿದ್ದರು. ಇನ್ನೂ ಸಾರ್ವಜನಿಕರು, ವಾಹನಗಳು, ಬಸ್ ಸಂಚಾರ ಎಂದಿನಂತಿತ್ತು.

ಹಸಿರು ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ದೇವರಾಜು ತಿಮ್ಲಾಪುರ ಮಾತನಾಡಿ, ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಕಾರ್ಪೊರೇಟ್ ಕಂಪನಿಗಳ ಆದಾಯವನ್ನು ದ್ವಿಗುಣಗೊಳಿಸುವಲ್ಲಿ ನಿರತರಾಗಿದ್ದಾರೆ. ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ಜನರು ಕಂಗಾಲಾಗಿದ್ದಾರೆ. ದಿನನಿತ್ಯದ ವಸ್ತುಗಳನ್ನು ಕೊಳ್ಳಲಾಗದೆ ಸಂಕಷ್ಟದಲ್ಲಿದ್ದಾರೆ ಎಂದು ದೂರಿದರು.

ಜನಸ್ಪಂದನ ಟ್ರಸ್ಟ್ ಅಧ್ಯಕ್ಷ ಸಿ.ಬಿ. ಶಶಿಧರ್ ಮಾತನಾಡಿದರು. ರೈತ ಸಂಘದ ಯೋಗಾನಂದಸ್ವಾಮಿ, ತಾಲ್ಲೂಕು ಘಟಕದ ಅಧ್ಯಕ್ಷ ಬಸ್ತಿಹಳ್ಳಿ ರಾಜಣ್ಣ, ಜೆಡಿಎಸ್‍ನ ತರಕಾರಿ ನಾಗರಾಜು, ಬಿ.ಬಿ. ಸಿದ್ದಲಿಂಗಮೂರ್ತಿ, ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಬಿ.ಎಸ್. ಅನಸೂಯ, ಎಐಟಿಯುಸಿ ನೌಕರರ ಸಂಘದ ಅಧ್ಯಕ್ಷ ಗೋವಿಂದರಾಜು, ಗ್ರಾ.ಪಂ. ಸದಸ್ಯ ನಾಗತೀಹಳ್ಳಿ ಕೃಷ್ಣಮೂರ್ತಿ, ನಿವೃತ್ತ ಉಪನ್ಯಾಸಕ ಜಯಾನಂದಪ್ಪ, ಸಂಚಾಲಕ ಲೋಕೇಶ್ ಭೈರನಾಯಕನಹಳ್ಳಿ, ಮನೋಹರ್ ಪಟೇಲ್, ಶ್ರೀಕಾಂತ್, ಆರ್‌ಕೆಎಸ್ ಸಹ ಸಂಚಾಲಕ ಪ್ರಶಾಂತ್ ಹಾಲ್ಕುರಿಕೆ, ರಂಗರಾಮಯ್ಯ, ಬೊಮ್ಮಲಾಪುರ ದಕ್ಷಿಣಮೂರ್ತಿ, ಪ್ರಸಾದ್ ಮಾದಿಹಳ್ಳಿ, ಗೋಪಿ ಬೊಮ್ಮೇನಹಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT