ತುಮಕೂರು: ‘ಬೆಂಗಳೂರಿನ ಲುಲು ಶಾಪಿಂಗ್ ಮಾಲ್‌ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನ ಬಾವುಟ ಹಾರಿಸಿದ್ದಾರೆ’ ಎಂದು ಎಕ್ಸ್ ಖಾತೆಯಲ್ಲಿ ಸುಳ್ಳು ಪೋಸ್ಟ್ ಹಂಚಿಕೊಂಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ಪೊಲೀಸರು ಗುರುವಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಭಾರತದ ಬಾವುಟಕ್ಕೆ ಅವಮಾನ ಮಾಡುವ ರೀತಿಯಲ್ಲಿ ಪೋಸ್ಟ್ ಹಾಕಿದ್ದಾರೆ. ಆ ಮೂಲಕ ಜನರ ಭಾವನೆಗಳನ್ನು ಕೆರಳಿಸುವ ಕೆಲಸ ಮಾಡಿದ್ದಾರೆ ಎಂದು ಐಪಿಸಿ 153 (ಬಿ) ಅಡಿ ಇಲ್ಲಿಯ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

'ಭಾರತದ ಬಾವುಟಕ್ಕಿಂತ ಬೇರೆ ಯಾವುದೇ ದೇಶದ ಬಾವುಟ ಎತ್ತರದಲ್ಲಿ ಇರಬಾರದು ಅನ್ನೋ ಸಾಮಾನ್ಯ ಜ್ಞಾನ ಇಲ್ಲವೇ ನಿಮ್ಮ ಮಾಲ್ ನವರಿಗೆ? @ಡಿ.ಕೆ. ಶಿವಕುಮಾರ್ #ಬಾಯ್ಕಾಟ್ ಲುಲುಮಾಲ್’ ಎಂದು ಸಪ್ತಗಿರಿ ಬಡಾವಣೆಯ ನಿವಾಸಿ ಶಕುಂತಲಾ ಬುಧವಾರ ತಮ್ಮ ಎಕ್ಸ್ ಖಾತೆಯಲ್ಲಿ ಚಿತ್ರವೊಂದನ್ನು ಪೋಸ್ಟ್ ಮಾಡಿದ್ದರು. ಅದರ ಬೆನ್ನಲ್ಲೇ ಗುರುವಾರ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಹಿಂದೆಯೂ ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೊ ಸೆರೆ ಹಿಡಿದ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಶಕುಂತಲಾ ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.