ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುರುವೇಕೆರೆ: ತೋಟದಲ್ಲಿ ಬೆಂಕಿ ನಂದಿಸುವಾಗ ರೈತ ಸಾವು

Published 3 ಮಾರ್ಚ್ 2024, 15:40 IST
Last Updated 3 ಮಾರ್ಚ್ 2024, 15:40 IST
ಅಕ್ಷರ ಗಾತ್ರ

ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿಯ ದೊಡ್ಡಮಾರ್ಗೋನಹಳ್ಳಿ ಗ್ರಾಮದ ರೈತ ಸಿದ್ದಯ್ಯ(90) ತೆಂಗಿನ ಸಸಿಗೆ ತಗುಲಿದ್ದ ಬೆಂಕಿ ನಂದಿಸುವಾಗ ಆಕಸ್ಮಿಕವಾಗಿ ಬೆಂಕಿ ಅವಪಘಡಕ್ಕೆ ತುತ್ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಿದ್ದಯ್ಯ ಭಾನುವಾರ ಸಂಜೆ ದೊಡ್ಡಮಾರ್ಗೋನಹಳ್ಳಿ ಹೊರ ವಲಯದ ತೋಟಕ್ಕೆ ತೆರಳಿದ್ದಾರೆ. ಬದುವಿನಲ್ಲಿದ್ದ ಹುಲ್ಲಿಗೆ ಬೆಂಕಿ ಹಾಕಿದ್ದಾರೆ. ಬೆಂಕಿ ಕ್ರಮೇಣ ಬದುವಿನ ಪಕ್ಕದಲ್ಲಿದ್ದ ತೆಂಗಿನ ಸಸಿಗೆ ಆವರಿಸಿದೆ. ನಂದಿಸುವಾಗ ಸಿದ್ದಯ್ಯ ಅವರಿಗೂ ಬೆಂಕಿಯ ಜ್ವಾಲೆ ರಾಚಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಅಕ್ಕಪಕ್ಕದ ತೋಟದವರು ಸಿದ್ದಯ್ಯ ಬೆಂಕಿಯಲ್ಲಿ ಬಿದ್ದಿರುವುದನ್ನು ಕಂಡು ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಪಿಎಸ್‌ಐ ಸಂಗಮೇಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT