ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾವಗಡ: ಟೊಮೆಟೊ ಬೆಳೆಯಿಂದ ನಷ್ಟ, ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ

Published 30 ಅಕ್ಟೋಬರ್ 2023, 11:15 IST
Last Updated 30 ಅಕ್ಟೋಬರ್ 2023, 11:15 IST
ಅಕ್ಷರ ಗಾತ್ರ

ಪಾವಗಡ: ತಾಲ್ಲೂಕಿನ ಗುಂಡ್ಲಹಳ್ಳಿ ಕೆರೆ ಬಳಿಯ ವಿದ್ಯುತ್ ಟವರ್‌ಗೆ ರೈತರೊಬ್ಬರು ನೇಣು ಹಾಕಿಕೊಂಡು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗುಂಡ್ಲಹಳ್ಳಿ ಕೆರೆ ಬಳಿಯ ಜಮೀನಿನಲ್ಲಿ ವಾಸವಿದ್ದ ನಾರಾಯಣಪ್ಪ (65) ಆತ್ಮಹತ್ಯೆ ಮಾಡಿಕೊಂಡವರು. ಇತ್ತೀಚೆಗೆ ಟೊಮೆಟೊ ಬೆಳೆದಿದ್ದು, ಬೆಲೆ ಕುಸಿತದಿಂದ ನಷ್ಟ ಅನುಭವಿಸಿದ್ದರು. ಕೈ ಸಾಲ ಸೇರಿದಂತೆ ₹5 ಲಕ್ಷ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬ ಸದಸ್ಯರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಮೃತರಿಗೆ ಪತ್ನಿ, ಮೂರು ಮಂದಿ ಪುತ್ರಿಯರು, ಪುತ್ರ ಇದ್ದಾರೆ.

ಪಟ್ಟಣ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT