ಕುಣಿಗಲ್: ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಖಂಡಿಸಿ ಬೆಂಗಳೂರಿನಲ್ಲಿ ನಡೆಯಲಿರುವ ಟ್ರ್ಯಾಕ್ಟರ್ ಪರೇಡ್‌ಗೆ ತಾಲ್ಲೂಕಿನಿಂದ ಹೊರಟಿದ್ದ ಟ್ರ್ಯಾಕ್ಟರ್‌ಗಳನ್ನು ಅಂಚೆಪಾಳ್ಯ ಬಳಿ ಸೋಮವಾರ ಸಂಜೆ ಪೊಲೀಸರು ತಡೆದಿದ್ದು, ಅಸಮಾಧಾನಗೊಂಡ ರೈತ ಸಂಘದ ಪದಾಧಿಕಾರಿಗಳು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.

ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆನಂದ್ ಪಟೇಲ್ ನೇತೃತ್ವದಲ್ಲಿ ತಾಲ್ಲೂಕಿನಿಂದ ಟ್ರ್ಯಾಕ್ಟರ್‌ಗಳಲ್ಲಿ ರೈತ ಸಂಘದ ಪದಾಧಿಕಾರಿಗಳು ಬೆಂಗಳೂರು ಕಡೆಗೆ ಸಾಗುತ್ತಿದ್ದರು. ಮಾಹಿತಿ ತಿಳಿದ ಸಿಪಿಐ ರಾಜು ಮತ್ತು ಸಿಬ್ಬಂದಿ ಆಗಮಿಸಿ ಬ್ಯಾರಿಕೇಡ್‌ಗಳನ್ನು ಅಡ್ಡಲಾಗಿಟ್ಟು ಬೆಂಗಳೂರಿಗೆ ಹೋಗದಂತೆ ತಡೆದರು. ಈ ವೇಳೆ ಪೊಲೀಸರು ಮತ್ತು ಪದಾಧಿಕಾರಿಗಳ ನಡುವೆ ವಾಗ್ವಾದ ನಡೆಯಿತು.

ಆನಂದ್ ಪಟೇಲ್ ಮಾತನಾಡಿ, ರೈತ ವಿರೋಧಿ ಕಾಯ್ದೆಗಳನ್ನು ಖಂಡಿಸಿ, ಪರೇಡ್ ಮಾಡುವುದಾಗಿ ಮೊದಲೇ ಸರ್ಕಾರದ ಗಮನಕ್ಕೆ ತರಲಾಗಿದೆ. ಆದರೂ, ಪೊಲೀಸರ ಮೂಲಕ ತಡೆಯಲು ಹೊರಟಿರುವುದು ಖಂಡನೀಯ ಎಂದು
ಹೇಳಿದರು.

ರೈತರು ಭಯೋತ್ಪಾದಕರಲ್ಲ. ರಾಜ್ಯ ಸರ್ಕಾರ ರೈತರ ಹೋರಾಟವನ್ನು ಹತ್ತಿಕ್ಕುವ ಕಾರ್ಯ ಮಾಡುತ್ತಿರುವುದು ಖಂಡನೀಯ. ರೈತರ ರಥವಾದ ಟ್ರ್ಯಾಕ್ಟರ್‌ಗಳನ್ನು ತಡೆಯುವಂತೆ ಯಾವ ಕಾನೂನು ಹೇಳಿಲ್ಲ. ರೈತರ ಹೋರಾಟ ಮುಂದುವರಿಯಲಿದೆ ಎಂದರು.

ತಾಲ್ಲೂಕು ಘಟಕದ ಅಧ್ಯಕ್ಷ ಅನಿಲ್ ಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.