ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಳಿಯಾರು: ರೈತ ಸಂಘದ ಪ್ರತಿಭಟನಾ ರ‍್ಯಾಲಿ

Last Updated 28 ಸೆಪ್ಟೆಂಬರ್ 2021, 3:28 IST
ಅಕ್ಷರ ಗಾತ್ರ

ಹುಳಿಯಾರು: ರೈತ ಸಂಘಟನೆಗಳು ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಪಟ್ಟಣದಲ್ಲಿ ಸೋಮವಾರ ಪ್ರತ್ಯೇಕ ಜಾಥಾ ನಡೆಸಿದರು.

ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಬಣದಿಂದ ಪಟ್ಟಣದ ರಾಮಗೋಪಾಲ್‌ ಸರ್ಕಲ್‌ನಿಂದ ಜಾಥಾ ನಡೆಯಿತು. ಪೊಲೀಸ್‌ ಠಾಣೆ ಬಳಿಯ ಸರ್ಕಲ್‌ನಲ್ಲಿ ಮಾನವ ಸರಪಳಿ ರಚಿಸಿ ನಂತರ ಉಪ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ರೈತ ಸಂಘದ(ಕೋಡಿಹಳ್ಳಿ ಚಂದ್ರಶೇಖರ್‌ ಬಣ) ಉಪಾಧ್ಯಕ್ಷ ಕೆಂಕೆರೆ ಸತೀಶ್ ಅವರ ನೇತೃತ್ವದಲ್ಲಿ ಪಟ್ಟಣದಲ್ಲಿ ಬೈಕ್‌ ‌ರ‍್ಯಾಲಿ ನಡೆಯಿತು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ಸರ್ಕಾರದ ಅವೈಜ್ಞಾನಿಕ ನೀತಿಗಳಿಂದ ರೈತರು ಮತ್ತು ನಾಗರಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ದೂರಿದರು.

ಬಂದ್‌ಗೆ ಚಿಕ್ಕನಾಯಕನಹಳ್ಳಿ ಹಾಗೂ ಹುಳಿಯಾರು ಪಟ್ಟಣದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಬಸ್‌ ಸಂಚಾರ ಎಂದಿನಂತೆ ಇತ್ತು. ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಲಿಲ್ಲ. ಬ್ಯಾಂಕ್‌, ಸರ್ಕಾರಿ ಕಚೇರಿಗಳು, ಶಾಲಾ–ಕಾಲೇಜು, ಅಂಗಡಿ ಮುಗ್ಗಟ್ಟು ತೆರೆದಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT