ಕಲ್ಲು ಗಣಿಗಾರಿಕೆಗೆ ರೈತರ ಖಂಡನೆ

ತುರುವೇಕೆರೆ: ತಾಲ್ಲೂಕಿನ ಕಸಬಾ ವ್ಯಾಪ್ತಿಯ ಕೋಳಘಟ್ಟ ಗ್ರಾಮದಲ್ಲಿ ಕಲ್ಲುಗಣಿಗಾರಿಕೆ ಮತ್ತು ಜಲ್ಲಿ ಕ್ರಷರ್ ಪುನಃ ಪ್ರಾರಂಭಗೊಂಡಿರುವ ಹಿನ್ನೆಲೆಯಲ್ಲಿ ರೈತರು, ಅಕ್ಕಪಕ್ಕದ ಗ್ರಾಮಸ್ಥರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.
ಜಲ್ಲಿ ಕ್ರಷರ್ ಮತ್ತು ಕಲ್ಲು ಗಣಿಗಾರಿಕೆ ನಡೆಸುತ್ತಿರುವವರು ಸೂಕ್ತ ಭದ್ರತೆ, ರಕ್ಷಣಾ ಗೋಡೆ ನಿರ್ಮಿಸದೆ ಗಣಿಗಾರಿಕೆ ನಡೆಸುತ್ತಿದ್ದಾರೆ. ಸಾರ್ವಜನಿಕರಿಗೆ ಇದರಿಂದ ತೊಂದರೆಯಾಗುತ್ತಿದೆ. ಉಸಿರಾಡಲೂ ಆಗದ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.