ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಎಚ್ಎಎಲ್ ಘಟಕಕ್ಕೆ ರೈತರ ಭೂಮಿ | ಸ್ವಾಧೀನಕ್ಕೆ ಬಿಡುವುದಿಲ್ಲ: ಶಾಸಕ ಶ್ರೀನಿವಾಸ್

Published : 15 ಆಗಸ್ಟ್ 2024, 13:38 IST
Last Updated : 15 ಆಗಸ್ಟ್ 2024, 13:38 IST
ಫಾಲೋ ಮಾಡಿ
Comments

ಗುಬ್ಬಿ: ತಾಲ್ಲೂಕಿನ ನಿಟ್ಟೂರು ಹೋಬಳಿ ಬಿದರೆಹಳ್ಳ ಕಾವಲಿನಲ್ಲಿ ಪ್ರತಿಷ್ಠಿತ ಎಚ್ಎಎಲ್ ಘಟಕ ಈಗಾಗಲೇ ಕಾರ್ಯರಂಭ ಮಾಡಿದೆ. ಘಟಕವನ್ನು ಮತ್ತಷ್ಟು ವಿಸ್ತರಿಸುವ ದೃಷ್ಟಿಯಿಂದ ಎಚ್‌ಎಎಲ್ ಅಧಿಕಾರಿಗಳು ಸ್ಥಳೀಯ ಕಂದಾಯ, ಕೃಷಿ, ತೋಟಗಾರಿಕೆ ಅಧಿಕಾರಿಗಳನ್ನು ಬಳಸಿಕೊಂಡು ಮತ್ತಷ್ಟು ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳಲು ಯತ್ನ ನಡೆಸಿದ್ದಾರೆ ಎನ್ನಲಾಗಿದೆ.

ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆ ಇರುವ ಸರ್ವೆ ನಂಬರ್ 37ರಿಂದ 40ರಲ್ಲಿರುವ ನೂರಾರು ಎಕರೆ ಫಲವತ್ತಾದ ಭೂಮಿ ಸ್ವಾಧೀನ ಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಈ ಜಮೀನನ್ನೇ ನಂಬಿ ಬದುಕು ಕಟ್ಟಿಕೊಂಡಿರುವ ನೂರಾರು ರೈತರು ಭೂಮಿ ಕಳೆದುಕೊಂಡು ಬೀದಿಗೆ ಬರುವ ಸ್ಥಿತಿ ಇದೆ.

ಇದಕ್ಕೆ ಪ್ರತಿಕ್ರಿಸಿದ ಶಾಸಕ ಎಸ್.ಆರ್ ಶ್ರೀನಿವಾಸ್, ಎಚ್ಎಎಲ್ ಘಟಕಕ್ಕೆ ಅಗತ್ಯವಿರುವ ಭೂಮಿ ಈಗಾಗಲೇ ನೀಡಲಾಗಿದೆ. ಘಟಕ ವಿಸ್ತರಿಸಬೇಕಿದ್ದರೆ ಘಟಕಕ್ಕೆ ಹೊಂದಿಕೊಂಡಂತೆ ಇರುವ ಅರಣ್ಯ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳಲಿ. ಯಾವುದೇ ಕಾರಣಕ್ಕೂ ರೈತರ ಭೂಮಿ ವಶಪಡಿಸಿಕೊಳ್ಳಲು ಬಿಡುವುದಿಲ್ಲ. ಈ ಸಂಬಂಧ ಎಚಎಎಲ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ತಹಶೀಲ್ದಾರ್‌ ಅವರಿಗೂ ಸೂಚನೆ ನೀಡಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT