ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

Last Updated 24 ನವೆಂಬರ್ 2020, 3:13 IST
ಅಕ್ಷರ ಗಾತ್ರ

ಕೊರಟಗೆರೆ: ‘ತಾಲ್ಲೂಕಿನ ಅಕ್ಕಾಜಿಹಳ್ಳಿ ಸರ್ವೆ ನಂ. 33ರಲ್ಲಿ ರೈತರು ಉಳಿಮೆ ಮಾಡುತ್ತಿದ್ದ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಬೆಂಗಳೂರಿನ ಕೆಲವರಿಗೆ ಸಾಗುವಳಿ ಮಾಡಲು ಅವಕಾಶ ನೀಡಿದ್ದಾರೆ’ ಎಂದು ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಆನಂದ ಪಾಟೀಲ ಹುಲಿಕಟ್ಟೆ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ಸರ್ವೆ ನಂ. 33ರ ವಿವಾದದ ಬಗ್ಗೆ ಸ್ಥಳ ಪರಿಶೀಲಿಸಿ ಅಲ್ಲಿ ನಿರ್ಮಿಸಿರುವ ಮನೆಯನ್ನು ಎರಡು ದಿನದಲ್ಲಿ ತೆರವು ಮಾಡುವುದಾಗಿ ಉಪವಿಭಾಗಾಧಿಕಾರಿ, ತಹಶೀಲ್ದಾರ್ ಹೇಳಿದ್ದರು. ಆದರೆ ಈವರೆಗೂ ಯಾವುದೇ ಕ್ರಮ ಕೈಗೊಳ್ಳದೆ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ’ ಎಂದು ಹೇಳಿದರು.

ಅಕ್ಕಾಜಿಹಳ್ಳಿ ಸರ್ವೆ ನಂ. 33ರಲ್ಲಿ ರೈತರಾದ ಕಾಮಣ್ಣ, ದಾಳಿನರಸಪ್ಪ ಜಮೀನು ಉಳುಮೆ ಮಾಡುತ್ತಿದ್ದರು. ಈಗ ಬೆಂಗಳೂರಿನ ಕೆಲವರು ವಶಪಡಿಸಿಕೊಂಡಿದ್ದು,ಸೋಮವಾರ ಸ್ಥಳಕ್ಕೆ ಭೇಟಿ ನೀಡಿದ ನಂತರ ಪತ್ರಕರ್ತರಿಗೆ ಈ ವಿಷಯ
ತಿಳಿಸಿದರು.

3 ವರ್ಷಗಳಿಂದ ರೈತರು ವ್ಯವಸಾಯ ಮಾಡುತ್ತಿದ್ದು ಬೆಂಗಳೂರಿನ ಕೆಲವರಿಗೆ ಏಕಾಏಕಿ ಸಾಗುವಳಿ ಚೀಟಿ ನೀಡಲಾಗಿದೆ. ಇದನ್ನು ವಿರೋಧಿಸಿ ಉಪವಿಭಾಗಾಧಿಕಾರಿ, ತಹಶೀಲ್ದಾರ್ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದರು. ಈ ವೇಳೆ ಮಧುಗಿರಿ ಉಪವಿಭಾಗಾಧಿಕಾರಿ ಎರಡು ದಿನದಲ್ಲಿ ದಾಖಲೆ ಹಾಗೂ ಸ್ಥಳ ಪರಿಶೀಲಿಸಿ ಮನೆ ತೆರವು ಮಾಡಿಸುವುದಾಗಿ ಭರವಸೆ ನೀಡಿದ್ದರು. ನಾಲ್ಕೈದು ದಿನ ಕಳೆದರೂ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ಕೊರಟಗೆರೆ ಪೊಲೀಸ್ ಸಬ್ಇನ್ಸ್‌ಪೆಕ್ಟರ್ ಕಂದಾಯ ಇಲಾಖೆಗೆ ಸಂಬಂಧಿಸಿದ ವಿಚಾರಕ್ಕೆ ವಿನಾಕಾರಣ ಮೂಗು ತೂರಿಸಿ, ರೈತರನ್ನೇ ಬೆದರಿಸುತ್ತಿದ್ದಾರೆ. ರೈತರು ತಮ್ಮ ಜಮೀನಿಗೆ ಹೋದರೆ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ತಹಶೀಲ್ದಾರ್ ಹಾಗೂ ಪಿಎಸ್ಐ ವಿರುದ್ಧ ಸರ್ಕಾರದ ಮಟ್ಟದಲ್ಲಿ ಹೋರಾಟ ನಡೆಸುವುದಾಗಿ ಅವರು ಎಚ್ಚರಿಸಿದರು.

ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಿದ್ದರಾಜು, ಜಿಲ್ಲಾ ಕಾರ್ಯದರ್ಶಿ ರುದ್ರೇಶ್, ರೈತ ಕಾಮಣ್ಣ, ದಾಳಿನರಸಪ್ಪ, ಗಂಗನರಸಪ್ಪ, ಹನುಮಂತರಾಯಪ್ಪ, ರಾಘವೇಂದ್ರ, ಸಂಜೀವಪ್ಪ, ರಾಜಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT