ಗುಬ್ಬಿ: ಬೇಸಿಗೆಯಲ್ಲಿ ರೈತರಿಗೆ ಸಮರ್ಪಕವಾಗಿ ವಿದ್ಯುತ್ ನೀಡದೆ ಬೆಸ್ಕಾಂ ಅಧಿಕಾರಿಗಳು ಸತಾಯಿಸುತ್ತಿದ್ದಾರೆ. ಸಮರ್ಪಕ ವಿದ್ಯುತ್ ಒದಗಿಸುವಂತೆ ಆಗ್ರಹಿಸಿ ನೂರಾರು ರೈತರು ಸೋಮವಾರ ಹೊಸಕೆರೆಯ ಬೆಸ್ಕಾಂ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಬಂಡನಹಳ್ಳಿ, ಭೋವಿಕಾಲೋನಿ ಭೋಗಸಂದ್ರ, ಹರದಗೆರೆ, ಕಳನಹಳ್ಳಿ, ಮುದ್ದನಹಳ್ಳಿ ಹಟ್ಟಿ, ಕರಡಿಕಲ್ಲು ಭಾಗದ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ವಿದ್ಯುತ್ ಸರಬರಾಜಿನಲ್ಲಿ ನಿರಂತರವಾಗಿ ವ್ಯತ್ಯಯ ಉಂಟಾಗುತ್ತಿದೆ. ಬೆಸ್ಕಾಂನವರು ಯಾವಾಗ ವಿದ್ಯುತ್ ಕೊಡುವರೋ, ತೆಗೆಯುವರೋ ತಿಳಿಯದಾಗಿದೆ. ಇದೀಗ ಮಕ್ಕಳಿಗೆ ವಾರ್ಷಿಕ ಪರೀಕ್ಷೆ ಪ್ರಾರಂಭವಾಗಿದೆ. ಪರೀಕ್ಷೆ ತಯಾರಿಗೆ ಅನಾನುಕೂಲ ಆಗುತ್ತಿದೆ. ತೋಟದ ಮನೆಗಳ ರೈತರ ಪಾಡನ್ನಂತೂ ಹೇಳತೀರದಾಗಿದೆ.
ಹಲವು ವೇಳೆ ಕುಡಿಯಲು ನೀರು ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ವಿದ್ಯುತ್ ಸಮಸ್ಯೆ ಬಗೆಹರಿಸಿ ಕೊಡುವಂತೆ ಹಲವಾರು ವರ್ಷಗಳಿಂದ ಅಧಿಕಾರಿಗಳನ್ನು ಕೇಳಿಕೊಳ್ಳುತ್ತಿದ್ದರೂ ಜಾಣಮೌನ ವಹಿಸಿದ್ದಾರೆ. ಇದರಿಂದ ರೈತರು ತೊಂದರೆ ಅನುಭವಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸ್ಥಳಕ್ಕೆ ಆಗಮಿಸಿದ ಬೆಸ್ಕಾಂ ಎಇಇ ರಾಜೇಶ್, ರೈತರ ಸಮಸ್ಯೆ ಅರಿತು ಅಗತ್ಯ ಕ್ರಮಕೈಗೊಳ್ಳಲಾಗುತ್ತಿದೆ. ಪ್ರಗತಿಯಲ್ಲಿರುವ ಲಿಂಕ್ ಲೈನ್ ಕಾಮಗಾರಿಯನ್ನು ತುರ್ತಾಗಿ ಮುಗಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಅಗತ್ಯ ಕ್ರಮಕೈಗೊಂಡು ರೈತರಿಗೆ ತೊಂದರೆ ಆಗದಂತೆ ವಿದ್ಯುತ್ ಪೂರೈಸಲಾಗುವುದು ಎಂದರು.

ಮಹಾ ರುದ್ರಸ್ವಾಮಿ, ಶಿವರಾಜು, ಮಧು, ಪ್ರಭಾಕರ್, ಗಂಗಾಧರ್, ಕುಮಾರ್, ರಾಜಣ್ಣ, ಕಾಂತಣ್ಣ, ಬಸವರಾಜು, ನಾಗರಾಜು, ಪಾಪಣ್ಣ, ನಟರಾಜು, ದಕ್ಷಿಣಾಮೂರ್ತಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.