ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿಭಟನೆ ವೇಳೆ ಎ.ಸಿ ಕಾಲಿಗೆ ಬಿದ್ದು ಕಣ್ಣೀರಿಟ್ಟ ರೈತ

Last Updated 20 ನವೆಂಬರ್ 2020, 2:03 IST
ಅಕ್ಷರ ಗಾತ್ರ

ಕೊರಟಗೆರೆ: ತಾಲ್ಲೂಕಿನ ಅಕ್ಕಾಜಿಹಳ್ಳಿ ಸರ್ವೇ ನಂಬರ್ 33ರಲ್ಲಿ ಸ್ಥಳೀಯ ರೈತರ ಜಮೀನಿಗೆ ಬೇರೆಡೆಯಿಂದ ಬಂದವರಿಗೆ ಅಕ್ರಮವಾಗಿ ಸಾಗುವಳಿ ಚೀಟಿ ನೀಡಿರುವುದನ್ನು ಖಂಡಿಸಿ ಗುರುವಾರ ತಾಲ್ಲೂಕು ಕಚೇರಿ ಎದುರು ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪ್ರತಿಭಟನೆ ನಡೆಯಿತು.

ರೈತ ಸಂಘದ ಜಿಲ್ಲಾ ಅಧ್ಯಕ್ಷ ಆನಂದ ಪಾಟೀಲ್ ಹುಲಿಕಟ್ಟೆ ಮಾತನಾಡಿ, ಸುಮಾರು 30 ವರ್ಷಗಳಿಂದ ಉಳುಮೆ ಮಾಡಿಕೊಂಡು ವ್ಯವಸಾಯ ಮಾಡುತ್ತಿದ್ದ ಸ್ಥಳೀಯ ರೈತರಾದ ಕಾಮಣ್ಣ ಹಾಗೂ ದಾಳಿನರಸಪ್ಪ ಎಂಬುವರ ಜಮೀನನ್ನು ಬೇರೆಡೆಯಿಂದ ಬಂದವರಿಗೆ ಏಕಾಏಕಿ ದಾಖಲಾತಿ ಸೃಷ್ಟಿಸಿ ಸಾಗುವಳಿ ಹಕ್ಕು ಪತ್ರ ನೀಡಲಾಗಿದೆ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್:ಆಂಡ್ರಾಯ್ಡ್ ಆ್ಯಪ್|ಐಒಎಸ್ ಆ್ಯಪ್

ಈ ವೇಳೆ ರೈತ ಕಾಮಣ್ಣ, ವ್ಯವಸಾಯ ಮಾಡಿಕೊಂಡು ಜೀವನ ಮಾಡುತ್ತಿರುವ ಜಮೀನಿಗೆ ಬೇರೆಯವರು ಏಕಾಏಕಿ ಬಂದು ನಮ್ಮನ್ನು ಒಕ್ಕಲೆಬ್ಬಿಸಿದ್ದಾರೆ. ನಮ್ಮ ಜಮೀನು ನಮಗೆ ಬಿಡಿಸಿಕೊಡಿ ಎಂದು ಉಪ ವಿಭಾಗಾಧಿಕಾರಿ ಕಾಲಿಗೆ ಬಿದ್ದು ಕಣ್ಣೀರಿಟ್ಟರು.

ಉಪ ವಿಭಾಗಾಧಿಕಾರಿ ಡಾ.ಕೆ. ನಂದಿನಿದೇವಿ ಮಾತನಾಡಿ, ಈಗಾಗಲೇ ಕಾಮಣ್ಣ ಹಾಗೂ ದಾಳಿ ನರಸಪ್ಪ ಅವರ ಸಾಗುವಳಿ ಜಮೀನು ಬೇರೆಯವರಿಗೆ ಹಕ್ಕು ಪತ್ರ ನೀಡಿರುವುದಕ್ಕೆ ಖಾತೆ ಮಾಡದಂತೆ ತಕಾರರು ಅರ್ಜಿ ಬಂದಿದೆ. ಜಮೀನನ್ನು ಅಕ್ರಮವಾಗಿ ಮುಂಜೂರು ಮಾಡಿದ್ದರೆ ವಜಾ ಮಾಡಲು ಕ್ರಮವಹಿಸಲಾಗುವುದು ಎಂದರು.

ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ರುದ್ರೇಶ್ ಗೌಡ, ತಾಲ್ಲೂಕು ಅಧ್ಯಕ್ಷ ಸಿದ್ದರಾಜು, ಉಪಾಧ್ಯಕ್ಷ ಪುಟ್ಟರಾಜು, ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ಕಾರ್ಯದರ್ಶಿ ಪ್ರಸನ್ನಕುಮಾರ್, ಮುಖಂಡರಾದ ಚಿಕ್ಕರಂಗಯ್ಯ, ಮಂಜುನಾಥ, ಲೋಕಣ್ಣ, ನಾಗರಾಜು, ಮಲ್ಲೇಶ್, ಬಸವರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT