ಭಾನುವಾರ, ಸೆಪ್ಟೆಂಬರ್ 26, 2021
21 °C

ಬಂಡವಾಳಶಾಹಿಗಾಗಿ ರೈತರ ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುರುವೇಕೆರೆ: 28ರಂದು ನಡೆಯುವ ರಾಜ್ಯ ಬಂದ್‌ಗೆ ಕನ್ನಡ ರಕ್ಷಣಾ ವೇದಿಕೆಯ ಬೆಂಬಲವಿದೆ ಎಂದು ವೇದಿಕೆ ಉಪಾಧ್ಯಕ್ಷ ಮುಷೀರ್ ಅಹಮದ್ ಹೇಳಿದರು.

ಪಟ್ಟಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಸೋಮವಾರ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ತಾಲ್ಲೂಕಿನಲ್ಲಿ ಬಂದ್‍ ಆಚರಿಸಲಾಗುವುದು’ ಎಂದರು.

ಕೇಂದ್ರ ಸರ್ಕಾರ ವಿವಿಧ ಕಾಯ್ದೆಗಳಿಗೆ ತಿದ್ದುಪಡಿ ತರುವ ಮುನ್ನ ಅದರ ಸಾಧಕ ಭಾಧಕಗಳ ಕುರಿತು ರೈತರೊಂದಿಗೆ ಚರ್ಚಿಸಬೇಕಿತ್ತು. ಆದರೆ ನೇರವಾಗಿ ಸುಗ್ರೀವಾಜ್ಞೆ ಮೂಲಕ ಕಾಯ್ದೆ ಜಾರಿಗೆ ಮುಂದಾಗಿದೆ. ಸರ್ಕಾರ ಬಂಡವಾಳಶಾಹಿಗೆ ಅನುಕೂಲ ಮಾಡಿಕೊಡಲು ದೇಶದ ರೈತರನ್ನು ಬಲಿ ಕೊಡುತ್ತಿದೆ ಎಂದರು.

ಸಭೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ರೈತ ಬಣದ ನಾಗೇಂದ್ರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು