ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ ಭಯ: ಕೃಷಿ ಕಾಯ್ದೆ ರದ್ದು- ಶಾಸಕ ಜಿ.ಪರಮೇಶ್ವರ ಆರೋಪ

Last Updated 3 ಡಿಸೆಂಬರ್ 2021, 5:11 IST
ಅಕ್ಷರ ಗಾತ್ರ

ತುರುವೇಕೆರೆ: ‘ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾಯ್ದೆಗಳನ್ನು ರೈತರ ಹಿತದೃಷ್ಟಿಯಿಂದ ಹಿಂಪಡೆದಿಲ್ಲ. ಬದಲಾಗಿ ಮುಂಬರುವ ಐದು ರಾಜ್ಯಗಳ ಚುನಾವಣೆಯ ದೃಷ್ಟಿಯಿಂದ ಹಿಂದಕ್ಕೆ ಪಡೆದಿದ್ದಾರೆ’ ಎಂದು ಶಾಸಕ ಜಿ.ಪರಮೇಶ್ವರ ಹೇಳಿದರು.

ಪಟ್ಟಣದ ಬಿಜಿಎಸ್ ಸಮುದಾಯ ಭವನದಲ್ಲಿ ಗುರುವಾರ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ರೈತ ವಿರೋಧಿ ಕೃಷಿ ಕಾಯ್ದೆ ಹಿಂಪಡೆಯುವಂತೆ 11 ತಿಂಗಳಿನಿಂದ ಸಾವಿರಾರು ರೈತರು ಪ್ರತಿಭಟಿಸಿದರೂ ಕಿವಿಗೊಡದ ಪ್ರಧಾನಿ ಈಗ ಸೋಲಿನ ಭಯದಿಂದ ರದ್ದುಗೊಳಿಸಿದ್ದಾರೆ ಎಂದು ಟೀಕಿಸಿದರು.

ಮಾಜಿ ಕೇಂದ್ರ ಸಚಿವ ಮುನಿಯಪ್ಪ ಮಾತನಾಡಿ, ಕಾಂಗ್ರೆಸ್ ಅಧಿಕಾರವಧಿಯಲ್ಲಿ ಸಿದ್ದರಾಮಯ್ಯ ನೂರಾರು ಜನಪರ ಕೆಲಸ ಮಾಡಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ನಿಗಮಗಳಿಗೆ ಕೋಟಿ ಅನುದಾನ ನೀಡಿದ್ದರು. ಈಗಿನ ಸರ್ಕಾರ ಬಿಡಿಗಾಸೂ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಭ್ಯರ್ಥಿ ರಾಜೇಂದ್ರ ರಾಜಣ್ಣ ಮಾತನಾಡಿ, ಜಿಲ್ಲೆಯಲ್ಲಿ ಉತ್ತಮ ಕೆಲಸ ಮಾಡಲು ಅವಕಾಶ ನೀಡಿ ಎಂದು ಮನವಿ ಮಾಡಿದರು.

ಬೆಮೆಲ್ ಕಾಂತರಾಜು ಕಚೇರಿಗೆ ಭೇಟಿ: ಪಟ್ಟಣಕ್ಕೆ ಬಂದಿದ್ದ ಶಾಸಕ ಜಿ. ಪರಮೇಶ್ವರ, ಮಾಜಿ ಸಂಸದ ಮುನಿಯಪ್ಪ, ಮುದ್ದಹನುಮೇಗೌಡ ಹಾಗೂ ಮುಖಂಡರು ಕಾಂಗ್ರೆಸ್ ಸಭೆಗೂ ಮುನ್ನಾ ಪಟ್ಟಣದಲ್ಲಿರುವ ವಿದಾನ ಪರಿಷತ್ ಸದಸ್ಯ ಬೆಮೆಲ್ ಕಾಂತರಾಜು ಅವರ ಕಚೇರಿಗೆ ಬೇಟಿ ನೀಡಿದ್ದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕರ ರಾಜಣ್ಣ, ಟಿ.ಬಿ.ಜಯಚಂದ್ರ, ಷಡಕ್ಷರಿ, ಲಕ್ಕಪ್ಪ, ಮಾಜಿ ಸಂಸದ ಮುದ್ದಹನುಮೇ ಗೌಡ, ಮುಖಂಡರಾದ ಗೀತಾರಾಜಣ್ಣ, ಚೌದ್ರಿರಂಗಪ್ಪ, ವಸಂತಕುಮಾರ್, ಸುಬ್ರಮಣಿ ಶ್ರೀಕಂಠೇಗೌಡ, ಪ್ರಸನ್ನಕುಮಾರ್, ನಾಗೇಶ್, ನಂಜುಂಡಪ್ಪ, ಎಂ.ಡಿ.ಮೂರ್ತಿ, ವೇಣುಗೋಪಾಲ್, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು, ಮುಖಂಡರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT