ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು | ಲೋಕಾಯುಕ್ತ ಹೆಸರಲ್ಲಿ ಹಣಕ್ಕೆ ಬೇಡಿಕೆ: ಪ್ರಕರಣ ದಾಖಲು

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಿಗೆ ಬೆದರಿಕೆ
Published 27 ಏಪ್ರಿಲ್ 2024, 14:35 IST
Last Updated 27 ಏಪ್ರಿಲ್ 2024, 14:35 IST
ಅಕ್ಷರ ಗಾತ್ರ

ತುಮಕೂರು: ‘ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ’ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಸ್‌.ಕೃಷ್ಣಪ್ಪ ದೂರು ನೀಡಿದ್ದು, ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಕರೆ ಮಾಡಿದ ವ್ಯಕ್ತಿಯು ಲೋಕಾಯುಕ್ತ ಉಪಾಧೀಕ್ಷಕ ಉಮಾಮಹೇಶ್‌ ಎಂಬ ಹೆಸರಿನಿಂದ ಪರಿಚಯಿಸಿಕೊಂಡು ₹50 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಇಲ್ಲದಿದ್ದರೆ ಲೋಕಾಯುಕ್ತ ಪೊಲೀಸರು ದಾಳಿ ಮಾಡುತ್ತಾರೆ ಎಂದು ಬೆದರಿಸಿದ್ದಾರೆ. ನನಗೆ 12 ಬಾರಿ, ನನ್ನ ಕಚೇರಿಯ ಪತ್ರಾಂಕಿತ ವ್ಯವಸ್ಥಾಪಕರಿಗೆ 5 ಬಾರಿ ಕರೆ ಮಾಡಿ ಹಣ ನೀಡುವಂತೆ ಒತ್ತಾಯಿಸಿದ್ದಾರೆ’ ಎಂದು ಕೃಷ್ಣಪ್ಪ ದೂರಿನಲ್ಲಿ ತಿಳಿಸಿದ್ದಾರೆ.

ಬೆದರಿಕೆ ಹಾಕಿದ ವ್ಯಕ್ತಿಯನ್ನು ಪತ್ತೆ ಹಚ್ಚಿ ಕಾನೂನು ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ. ದೂರಿನ ಆಧಾರದ ಮೇರೆಗೆ 507 (ಅನಾಮಧೇಯ ಸಂವಹನದಿಂದ ಕ್ರಿಮಿನಲ್‌ ಬೆದರಿಕೆ), 419 (ವಂಚನೆ) ಸೇರಿದಂತೆ ವಿವಿಧ ಕಲಂ ಅಡಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT