ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಬ್ಬಿ | ವಲಯ ಅರಣ್ಯಾಧಿಕಾರಿ ವಿರುದ್ಧ ಎಫ್‌ಐಆರ್‌

Published 30 ಜನವರಿ 2024, 15:29 IST
Last Updated 30 ಜನವರಿ 2024, 15:29 IST
ಅಕ್ಷರ ಗಾತ್ರ

ಗುಬ್ಬಿ: ಚಿಕ್ಕನಾಯಕನಹಳ್ಳಿ ವಲಯ ಅರಣ್ಯಾಧಿಕಾರಿ ಅರುಣ್‌ ಸಿ.ಆರ್. ಹಾಗೂ ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ್ ಎಚ್. ವಿರುದ್ಧ ಗಸ್ತು ವನಪಾಲಕ ನಂದೀಶ್ ಬಿ. ಅವರು ಗುಬ್ಬಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ.

‘ತಾಲ್ಲೂಕಿನ ಕಸಬಾ ಹೋಬಳಿ ಚನ್ನಶೆಟ್ಟಿಹಳ್ಳಿ ವರ್ತುಲ ರಸ್ತೆಯಲ್ಲಿ ನನ್ನ ಹಲ್ಲೆ ನೆಡಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ನಡುರಸ್ತೆಯಲ್ಲಿಯೇ ಬಿಟ್ಟು ಹೋಗಿದ್ದಾರೆ’ ಎಂದು ನಂದೀಶ್‌ ದೂರಿದ್ದಾರೆ.

‘ವಲಯ ಅರಣ್ಯಾಧಿಕಾರಿ ಕೆಳ ಹಂತದ ಸಿಬ್ಬಂದಿ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ. ಸರಿಯಾಗಿ ವೇತನ ಬಟವಾಡೆ ಮಾಡದೆ ಆಕ್ರಮದಲ್ಲಿ ತೊಡಗಿದ್ದಾರೆ. ಇದನ್ನು ಪ್ರಶ್ನಿಸಲು ಹೋದರೆ ನನ್ನನ್ನು ನಿಂದಿಸಿ ಹಲ್ಲೆ ನಡೆಸಿದ್ದಾರೆ’ ಎಂದು ದೂರಿನಲ್ಲಿ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT