ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಬ್ಬಿ | ಕೊಬ್ಬರಿ ಶೆಡ್‌ಗೆ ಬೆಂಕಿ

Published 11 ಏಪ್ರಿಲ್ 2024, 5:18 IST
Last Updated 11 ಏಪ್ರಿಲ್ 2024, 5:18 IST
ಅಕ್ಷರ ಗಾತ್ರ

ಗುಬ್ಬಿ: ತಾಲ್ಲೂಕಿನ ನಿಟ್ಟೂರು ಹೋಬಳಿ ಎನ್‌. ರಾಂಪುರದಲ್ಲಿ ಬುಧವಾರ ಮಧ್ಯರಾತ್ರಿ ದುಷ್ಕರ್ಮಿಗಳು ಕೊಬ್ಬರಿ ಶೆಡ್‌ಗೆ ಬೆಂಕಿ ಹಚ್ಚಿದ್ದು, ಕೊಬ್ಬರಿ, ಟ್ರ್ಯಾಕ್ಟರ್, ದ್ವಿಚಕ್ರ ವಾಹನ ಭಸ್ಮವಾಗಿದೆ.

ಶಿವಗಂಗಮ್ಮ ಅವರು ತಮ್ಮ ಕುಟುಂಬ ಸಮೇತ ತೋಟದಲ್ಲಿ ವಾಸವಿದ್ದರು. ಮನೆಯ ಸಮೀಪದಲ್ಲಿಯೇ ಕಾಯಿ ತುಂಬಲು ಶೆಡ್‌ ನಿರ್ಮಿಸಿದ್ದರು. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದರು.

ಶೆಡ್‌ನಲ್ಲಿದ್ದ ಸುಮಾರು 30 ಸಾವಿರ ಕೊಬ್ಬರಿ, ಟ್ರ್ಯಾಕ್ಟರ್, ಬೈಕ್‌ ಹಾಗೂ ಕೃಷಿ ಪರಿಕರಗಳು ಸುಟ್ಟು ಹೋಗಿವೆ. ‘ಬರದ ನಡುವೆ ಬದುಕು ಕಟ್ಟಿಕೊಳ್ಳಲು ಪರದಾಡುತ್ತಿದ್ದ ನಮಗೆ ಈ ಅವಘಡ ತುಂಬಾ ಸಂಕಷ್ಟ ತಂದೊಡ್ಡಿದೆ. ಏನಾದರೂ ಪರಿಹಾರ ಸಿಕ್ಕರೆ ಮತ್ತೆ ಬದುಕು ಕಟ್ಟಿಕೊಳ್ಳಬಹುದು’ ಎಂದು ರೈತ ಮಹಿಳೆ ಶಿವಗಂಗಮ್ಮ ಅಳಲು ತೋಡಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT