ಕಳವಿಗೆ ಯತ್ನ: ಗಾಳಿಯಲ್ಲಿ ಗುಂಡು
ಗುಬ್ಬಿ: ಪಟ್ಟಣದ ಮಹಾತ್ಮ ಗಾಂಧಿ ರಸ್ತೆಯಲ್ಲಿ ಮಂಗಳವಾರ ಮಧ್ಯ ರಾತ್ರಿ ಕಳ್ಳರು ಎರಡು ಅಂಗಡಿಗಳ ಬೀಗ ಮುರಿದು ಹಣ ದೋಚಿದ್ದಾರೆ.
ಇದನ್ನು ಗಮನಿಸಿದ ಗಸ್ತಿನಲ್ಲಿದ್ದ ಪೊಲೀಸರು, ಕಳ್ಳರನ್ನು ಹಿಡಿಯಲು ಪ್ರಯತ್ನಿಸಿದಾಗ ಸಾರ್ವಜನಿಕರು ನೆರವಾಗಿದ್ದಾರೆ. ಈ ಸಂದರ್ಭದಲ್ಲಿ ಸಾರ್ವಜನಿಕರೊಬ್ಬರು ನಾಡ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಯಾವುದೇ ಪ್ರಾಣಾಪಾಯವಾಗಿಲ್ಲ. ಕಳ್ಳತನದ ದೃಶ್ಯಗಳು ಸಿ.ಸಿ ಟಿ.ವಿ ಕ್ಯಾಮರಾದಲ್ಲಿ ಸೆರೆಯಾಗಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.