ಗುಬ್ಬಿ: ತಾಲ್ಲೂಕಿನ ಸಿ.ಎಸ್. ಪುರ ಹೋಬಳಿ ನೆಟ್ಟೆಕೆರೆಯ ರೈತ ಮಾಯಣ್ಣ ಗೌಡ ತಮ್ಮ ಜಮೀನಿನಲ್ಲಿ ಬೆಳೆಸಿದ್ದ ಮೂರು ವರ್ಷದ 300 ಅಡಿಕೆ ಗಿಡಗಳು ಬೆಂಕಿಗೆ ಆಹುತಿಯಾಗಿವೆ. ಬಾಳೆಗಿಡ ಹಾಗೂ ಹನಿ ನೀರಾವರಿ ಪೈಪ್ಗಳು ಸುಟ್ಟುಹೋಗಿವೆ. ಘಟನೆ ನಡೆದ ನಾಲ್ಕು ದಿನಗಳ ನಂತರ ಸಿಎಸ್ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಾಯಣ್ಣ ಗೌಡರು ಹೇಳುವ ಪ್ರಕಾರ ‘ಈ ಘಟನೆಗೆ ಗ್ರಾಮ ಪಂಚಾಯಿತಿ ಚುನಾವಣೆಯ ದ್ವೇಷವೇ ಕಾರಣ. ನಾನು ಬಿಜೆಪಿ ಬೆಂಬಲಿತ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದೆ. ಇದನ್ನು ಸಹಿಸದ ಕೆಲವರು ಈ ಕೃತ್ಯ ಎಸಗಿದ್ದಾರೆ. ವೈಯಕ್ತಿಕವಾಗಿ ಯಾರ ಮೇಲೂ ದ್ವೇಷವಿಲ್ಲ. ರಾಜಕೀಯ ದ್ವೇಷಕ್ಕೆ ಈ ಕೃತ್ಯ ಎಸಗಿದ್ದಾರೆ. ಗ್ರಾಮಪಂಚಾಯಿತಿ ಚುನಾವಣೆಯೇ ಇದಕ್ಕೆಲ್ಲ ಕಾರಣವಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

‘ಈ ಬಗ್ಗೆ ಶೀಘ್ರ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.