ಸೋಮವಾರ, ಜೂನ್ 14, 2021
28 °C

ಕೊಳೆಗೇರಿಯಲ್ಲಿ ಗುಡಿಸಲಿಗೆ ಬೆಂಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ನಗರದ ಬನಶಂಕರಿ 2ನೇ ಹಂತದಲ್ಲಿರುವ ಇಸ್ಮಾಯಿಲ್ ನಗರದ ಹಂದಿ ಜೋಗಿ ಸ್ಲಂನ ಗಂಗಮ್ಮ ಗುರುಸ್ವಾಮಿ ಎಂಬುವರ ಗುಡಿಸಲಿಗೆ ಸೋಮವಾರ ರಾತ್ರಿ ಬೆಂಕಿ ತಗುಲಿದೆ.

ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಈ ಹಿಂದೆಯು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಈಗಾದರೆ ಬದುಕುವುದಾದರೂ ಹೇಗೆ? ಗುಡಿಸಲಿನ ಅರ್ಧದಷ್ಟು ಹೊದಿಕೆ ಟಾರ್ಪಲ್, ಮಕ್ಕಳು ತೊಡುವ ಬಟ್ಟೆಗಳು ಮತ್ತು ಜೀವನಕ್ಕೆ ಕೂಡಿಟ್ಟ ದವಸ ಧಾನ್ಯಗಳು ಸುಟ್ಟಿವೆ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.

ಕೊರೊನಾ ಬಂದಾಗಿನಿಂದ ಜೀವನ ನಡೆಸುವುದೇ ಕಷ್ಟವಾಗಿರುವ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಗುಡಿಸಲಿಗೆ ಬೆಂಕಿ ಹಚ್ಚಿ, ಭಯದ ವಾತಾವರಣ ಸೃಷ್ಟಿಸಿ, ಒಕ್ಕಲೆಬ್ಬಿಸುವ ಹುನ್ನಾರವನ್ನು ಕಿಡಿಗೇಡಿಗಳು ಮಾಡುತ್ತಿದ್ದಾರೆ. ಶೀಘ್ರವೇ ಜಿಲ್ಲಾಡಳಿತ, ಮಹಾನಗರ ಪಾಲಿಕೆ ನಮ್ಮನ್ನು ನಾಗರಿಕರಂತೆ ಕಂಡು, ಇಲ್ಲಿನ ಕುಟುಂಬಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಗುಡಿಸಲು ನಿವಾಸಿಗಳು ಹಾಗೂ ತುಮಕೂರು ಜಿಲ್ಲಾ ಕೊಳೆಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಒತ್ತಾಯಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.