ಭಾನುವಾರ, ಸೆಪ್ಟೆಂಬರ್ 19, 2021
23 °C

ಮೀನುಗಾರಿಕೆ ಕಾರ್ಯಾಗಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುರುವೇಕೆರೆ: ಪಟ್ಟಣದ ಮೀನುಗಾರಿಕಾ ಇಲಾಖೆ ಹಾಗೂ ಬಾಣಸಂದ್ರದ ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀನುಗಾರರ ಸಹಕಾರ ಸಂಘದಿಂದ ಕೆರೆ ಸ್ವಚ್ಛತೆ ಮತ್ತು ಮೀನುಗಾರಿಕೆ ಉದ್ಯಮ ಕುರಿತು ಜಾಗೃತಿ ಕಾರ್ಯಗಾರ ತಾಲ್ಲೂಕಿನ ಕಸಬಾ ವ್ಯಾಪ್ತಿಯ ಮಲ್ಲಾಘಟ್ಟ ಕೆರೆ ಆವರಣದಲ್ಲಿ ಮಂಗಳವಾರ ನಡೆಯಿತು.

ಜಿಲ್ಲಾ ಮೀನುಗಾರಿಕೆ ಉಪ ನಿರ್ದೇಶಕ ವಿಶ್ವನಾಥ್ ಮಾತನಾಡಿ, ತಾಲ್ಲೂಕಿನ ಮೀನುಗಾರರು ಸರ್ಕಾರ ಮತ್ತು ಇಲಾಖೆ ನೀಡುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕ ಸಬಲೀಕರಣ ಹೊಂದಬೇಕು. ಜೊತೆಗೆ ಮೀನುಗಾರಿಕೆಯನ್ನು ಒಂದು ಪ್ರಧಾನ ಉದ್ಯಮದ ರೀತಿ ಕಾಣಬೇಕು ಎಂದು ಸಲಹೆ ನೀಡಿದರು.

ಮೀನುಗಾರಿಕೆ ಸಂಶೋಧನಾ ಕೇಂದ್ರದ ಉಪನ್ಯಾಸಕ ಡಾ.ಶಿವಕುಮಾರ್ ಉಪನ್ಯಾಸ ನೀಡಿದರು.

ಮೀನುಗಾರರ ಸಹಕಾರ ಸಂಘದ ಪದಾಧಿಕಾರಿಗಳು ಮಲ್ಲಾಘಟ್ಟ ಕೆರೆ ಆವರಣವನ್ನು ಸ್ವಚ್ಛಗೊಳಿಸಿದರು.

ಜಂಟಿ ನಿರ್ದೇಶಕ ಚಿಕ್ಕವೀರ ನಾಯ್ಕ್, ಮೀನುಗಾರಿಕೆ ಸಹಾಯಕ ನಿರ್ದೇಶಕ ಮೋಹನ್ ಕುಮಾರ್, ಎಸ್.ವಿ.ದೀಪಾಲಿ, ಕಾವ್ಯ, ಪ್ರಕಾಶ್, ಬಾಣಸಂದ್ರದ ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ರಾಮಚಂದ್ರಯ್ಯ, ಉಪಾಧ್ಯಕ್ಷ ಅನಂತಯ್ಯ, ಸಂಘದ ನಿರ್ದೇಶಕರಾದ ನಾಗರಾಜು, ಮುಖಂಡರಾದ ಈರಣ್ಣ, ಜಗದೀಶ್ ಭಾಗವಹಿಸಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.