ಸೋಮವಾರ, ನವೆಂಬರ್ 30, 2020
19 °C

ಪಾಲಿಕೆಗೆ ಐವರ ನಾಮಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಮಹಾನಗರ ಪಾಲಿಕೆ ಸದಸ್ಯರಾಗಿ ಐವರು ನಾಮಕರಣಗೊಂಡಿದ್ದು, ಅವರಿಗೆ ಸ್ವಾಗತ ಕೋರಲಾಯಿತು.

ನೂತನ ನಾಮನಿರ್ದೇಶಿತ ಸದಸ್ಯರಾದ ಡಿ.ಎ. ಮೋಹನ್, ಕೆ.ಎನ್. ಶಿವರಾಜು, ನರಸಿಂಹಸ್ವಾಮಿ, ತ್ಯಾಗರಾಜಸ್ವಾಮಿ, ವಿಶ್ವನಾಥ್ ಅವರನ್ನು ಶಾಸಕ ಜ್ಯೋತಿಗಣೇಶ್ ಸ್ವಾಗತಿಸಿದರು.

‘ನಗರದ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಬೇಕು. ಚುನಾಯಿತ ಸದಸ್ಯರ ಜತೆಗೆ ಜಿದ್ದಿಗೆ ಬೀಳದೆ, ಅವರಿಗೆ ಪೂರಕವಾಗಿ ಕೆಲಸ ಮಾಡುವ ಮೂಲಕ ನಗರದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಹಕಾರ ನೀಡಬೇಕು’ ಎಂದು ಸಲಹೆ ಮಾಡಿದರು.

ಕಳೆದ 45 ದಿನಗಳ ಹಿಂದೆಯೇ ಸರ್ಕಾರ ಸದಸ್ಯರನ್ನು ನೇಮಕ ಮಾಡಿತ್ತು. ಆದರೆ, ಚುನಾವಣೆ ನೀತಿಸಂಹಿತೆ ಹಿನ್ನೆಲೆಯಲ್ಲಿ ನಗರಪಾಲಿಕೆಗೆ ಪರಿಚಯಿಸಲು ಸಾಧ್ಯವಾಗಿರಲಿಲ್ಲ ಎಂದರು.

ಮೇಯರ್ ಫರೀದಾ ಬೇಗಂ, ಪಾಲಿಕೆ ಆಯುಕ್ತೆ ರೇಣುಕಾ, ಪಾಲಿಕೆ ಸದಸ್ಯರಾದ ಮಲ್ಲಿಕಾರ್ಜುನಯ್ಯ, ಟಿ.ಜಿ. ಕೃಷ್ಣಪ್ಪ, ರಮೇಶ್, ವಿಷ್ಣುವರ್ಧನ್, ಮಂಜುನಾಥ್, ಗಿರಿಜಾ, ಮಂಜುಳಾ ಆದರ್ಶ, ನಿರ್ಮಲಾ ಶಿವಕುಮಾರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.