ಗುಬ್ಬಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಜಾನಪದ ಉತ್ಸವ ನಡೆಯಿತು.

ಕಾಲೇಜಿನ ಆವರಣವನ್ನು ಜನಪದ ವಸ್ತುಗಳಿಂದ ಅಲಂಕರಿಸಿ ಜಾನಪದ ಲೋಕವನ್ನೇ ಸೃಷ್ಟಿಸಲಾಗಿತ್ತು. ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಗೆ ತೊಟ್ಟು ಪಾಲ್ಗೊಂಡಿದ್ದರು.

ಕಾಲೇಜಿನ ಮುಂಭಾಗ ಹಸಿರು ಗರಿಯ ಚಪ್ಪರವನ್ನು ಹಾಕಿ ರಾಗಿ, ಭತ್ತ, ಜೋಳ, ಅವರೆ, ತೊಗರಿ, ಹುರುಳಿ ಇತ್ಯಾದಿ ಆಹಾರ ಧಾನ್ಯ, ತೆಂಗು, ಅಡಿಕೆ ಜೊತೆಗೆ ಪೂರ್ವಜರು ಬಳಸುತ್ತಿದ್ದ ಒನಕೆ, ಕಡುವಳ್ಳು ಬೀಸುವ ಕಲ್ಲು, ರುಬ್ಬು ಗುಂಡು, ಮಣ್ಣಿನ ಒಲೆ, ಪಾತ್ರೆ ಇತ್ಯಾದಿ ವಸ್ತುಗಳಿಂದ ಇಡೀ ಕಾಲೇಜಿನ ಆವರಣವನ್ನೇ ಅಲಂಕರಿಸಲಾಗಿತ್ತು.

ಕಾರ್ಯಕ್ರಮದ ಅತಿಥಿ ಕಲಾವಿದೆ ಬಿ.ಜಯಶ್ರೀ ಅವರನ್ನು ಪಟ್ಟಣದ ಬಸ್ ನಿಲ್ದಾಣದಿಂದ ವಿನೂತವಾಗಿ ಸಿಂಗರಿಸಿದ್ದ ಎತ್ತಿನಗಾಡಿಯಲ್ಲಿ ಡೋಲು, ನಗಾರಿ, ಅರೇವಾದ್ಯ, ಚಿಟ್ಟಿಮೇಳ, ಕೋಲಾಟ ಇತ್ಯಾದಿ ಜನಪದ ಕಲಾತಂಡಗಳೊಂದಿಗೆ ಕಾಲೇಜಿನವರೆಗೂ ಮೆರವಣಿಗೆಯಲ್ಲಿ ಕರೆತರಲಾಯಿತು.

ರಾಗಿ, ಭತ್ತ ಹಾಗೂ ಆಹಾರ ಧಾನ್ಯಗಳ ರಾಶಿಗೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಬಿ. ಜಯಶ್ರೀ, ಕಲೆಗಳ ತವರೂರಾಗಿರುವ ಗುಬ್ಬಿ ವಿಶೇಷ ಜಾನಪದ ಪರಂಪರೆ ಹೊಂದಿದೆ. ಯುವ ಪೀಳಿಗೆ ಪಾಶ್ಚಿಮಾತ್ಯ ಮೋಹಕ್ಕೆ ಒಳಗಾಗದೆ ದೇಶಿ ಸಂಸ್ಕೃತಿ ಹಾಗೂ ಜಾನಪದ ಸೊಗಡನ್ನು ಅರಿತು ಸಂಸ್ಕೃತಿಯ ಉಳಿವಿಗೆ ಮುಂದಾಗಬೇಕಿದೆ. ಈ ನಿಟ್ಟಿನಲ್ಲಿ ಕಾಲೇಜಿನಲ್ಲಿ ಆಯೋಜಿಸಿರುವ ಕಾರ್ಯಕ್ರಮ ಪ್ರಸ್ತುತವಾಗಿದೆ ಎಂದು ತಿಳಿಸಿದರು.

ರಂಗಭೂಮಿ, ಜನಪದಕಲೆ, ಸೋಬಾನೆ, ಹರಿಕಥೆ ಮುಂತಾದವುಗಳನ್ನು ಕಲಿಯುವ ಮೂಲಕ ಜನಪದ ಸೊಗಡು ಉಳಿಸಬೇಕು. ನಾಟಕ ಹಾಗೂ ಜಾನಪದದ ಬಗ್ಗೆ ತಿಳಿದಿರುವ ಕಲಾವಿದರು ತಂಡಗಳನ್ನು ಕಟ್ಟಿಕೊಂಡು ಎಲ್ಲೆಡೆ ಪ್ರದರ್ಶನ ನೀಡಿ ಅರಿವು ಮೂಡಿಸಬೇಕಿದೆ. ಇಲ್ಲವಾದಲ್ಲಿ ಮುಂದಿನ ಪೀಳಿಗೆಗೆ ಜನಪದ ಕಲೆಗಳ ಮಾಹಿತಿ ಇಲ್ಲವಾಗುವುದು ಎಂದು ಹೇಳಿದರು.

ಪ್ರಾಂಶುಪಾಲ ಪ್ರಸನ್ನ ಮಾತನಾಡಿ, ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆ ಹೊರತರಲು ಇಂತಹ ಕಾರ್ಯಕ್ರಮಗಳು ಪೂರಕ. ಯುವ ಪೀಳಿಗೆ ಜಾನಪದ ಹಾಗೂ ದೇಶಿ ಸಂಸ್ಕೃತಿಯ ಮಹತ್ವ ಅರಿಯಬೇಕಿದೆ. ಓದಿನ ಜೊತೆಯಲ್ಲಿ ಕಲೆಗಳನ್ನು ಮೈಗೂಡಿಸಿಕೊಂಡಲ್ಲಿ ಸಮಾಜದಲ್ಲಿ ಉತ್ತಮ ಮನ್ನಣೆ ಪಡೆಯಲು ಸಾಧ್ಯವಾಗುವುದು ಎಂದರು.

ಮೆರವಣಿಗೆಯ ಉದ್ದಕ್ಕೂ ತಮಟೆ, ಡೋಲು, ವಾದ್ಯಗಳ ತಾಳಕ್ಕೆ ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಹಾಗೂ ಸಿಬ್ಬಂದಿ ಹೆಜ್ಜೆ ಹಾಕಿದರು.

ತುಮಕೂರು ವಿಶ್ವವಿದ್ಯಾಲಯದ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಕರಿಯಣ್ಣ, ಕಾಲೇಜಿನ ಪ್ರಾಧ್ಯಾಪಕರು, ತಾಲ್ಲೂಕಿನ ಹಿರಿಯ ಕಲಾವಿದರು, ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.