ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್‌ ಚಿಂತನೆ ಅನುಸರಿಸಿ: ಲಕ್ಷ್ಮಣ್ ದಾಸ್

Last Updated 26 ಸೆಪ್ಟೆಂಬರ್ 2022, 16:30 IST
ಅಕ್ಷರ ಗಾತ್ರ

ಗುಬ್ಬಿ: ‘ಡಾ.ಬಿ.ಆರ್. ಅಂಬೇಡ್ಕರ್ ಅವರ ಬದುಕು, ಬರಹ, ಸಾಧನೆ ಹಾಗೂ ಸಾಮಾಜಿಕ ಚಿಂತನೆಗಳು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಆದರ್ಶವಾಗಬೇಕಿದೆ’ ಎಂದು ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕಲಾಶ್ರೀ ಲಕ್ಷ್ಮಣ್ ದಾಸ್ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಸಿ. ನಂದಿಹಳ್ಳಿಯ ಲೋಕಾಂಬ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮಕ್ಕೆ ಚಾಲನೆ ನೀಡಿಅವರು ಮಾತನಾಡಿದರು.

ದೇಶದ ಶೋಷಿತರ ಧ್ವನಿಯಾಗಿ, ಅಭಿವೃದ್ಧಿಯ ಪರವಾಗಿದ್ದ ಬಾಬಾ ಸಾಹೇಬರ ಚಿಂತನೆಗಳನ್ನು ಎಲ್ಲರೂ ಒಪ್ಪಿಕೊಂಡು ಅನುಸರಿಸಬೇಕಿದೆ. ಭಾರತದ ಬಹುತ್ವದ ನೆಲೆಯೊಳಗೆ ಪ್ರತಿಯೊಂದು ಮತ, ಧರ್ಮಕ್ಕೂ ಸಮಾನತೆ ಕಲ್ಪಿಸಿ ಸ್ವಾತಂತ್ರ‍್ಯ, ಸಮಾನತೆ, ಸಾಮಾಜಿಕ ನ್ಯಾಯವನ್ನು ದೊರಕಿಸಿಕೊಡಲು ಸಂವಿಧಾನವನ್ನು ರಚಿಸಲಾಗಿದೆ ಎಂದರು.

ಸಂವಿಧಾನವು ಈ ನೆಲದ ಶ್ರೇಷ್ಠ ಗ್ರಂಥವಾಗಿದೆ. ಅವರ ಜ್ಞಾನದಾಹ ಇಂದಿನ ವಿದ್ಯಾರ್ಥಿಗಳಿಗೆ ಆದರ್ಶವಾಗಬೇಕು ಎಂದು ತಿಳಿಸಿದರು.

ಕನ್ನಡ ಜಾಗೃತಿ ಸಮಿತಿ ಸದಸ್ಯ ಮಲ್ಲಿಕಾರ್ಜುನ್ ಕೆಂಕೆರೆ ಮಾತನಾಡಿ, ದೇಶದ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದಲ್ಲಿ ಗೊಂದಲ ಉಂಟಾದಾಗ ಸಂವಿಧಾನದಿಂದ ಮಾತ್ರ ಪರಿಹಾರ ಪಡೆಯಲು ಸಾಧ್ಯ ಎಂದರು.

ಪ್ರಾಧ್ಯಾಪಕ ಡಾ.ರಾಜಶೇಖರ್ ಸಿ. ಕೋಟೆ ಮಾತನಾಡಿ, ಅಂಬೇಡ್ಕರ್ ಅವರ ಚಿಂತನೆಗಳು ಕೇವಲ ಸಂವಿಧಾನಕಷ್ಟೇ ಸೀಮಿತವಾಗಿರಲಿಲ್ಲ. ಅನೇಕ ಕೃತಿಗಳನ್ನು ರಚಿಸುವ ಮೂಲಕ ಜ್ಞಾನ ಭಂಡಾರವನ್ನೇ ಸೃಷ್ಟಿಸಿದ್ದಾರೆ ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ. ರವಿಕುಮಾರ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೇಲ್ವಿಚಾರಕ ಡಿ.ವಿ. ಸುರೇಶ್ ಕುಮಾರ್, ಕಾಲೇ ಜಿನ ಉಪನ್ಯಾಸಕರಾದ ಜಿ.ಡಿ. ಮಂಜುನಾಥ್, ಶ್ರೀನಿವಾಸ್ ರಾವ್, ಶಿವನಂಜಯ್ಯ, ಪಿ.ಎಸ್. ಶ್ರೀನಿವಾಸ್, ನರಸಿಂಹರಾಜು, ದರ್ಶನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT