ಬುಧವಾರ, ಜೂನ್ 29, 2022
24 °C

ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಕೋವಿಡ್ ಲಾಕ್‍ಡೌನ್‌ನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿಸಿಕೊಂಡಿರುವ ಹೊರ ರಾಜ್ಯದ 250 ಮಂದಿ ಕೂಲಿ ಕಾರ್ಮಿಕರಿಗೆ ಸ್ವಾಮಿ ವಿವೇಕಾನಂದ ಸ್ಪೋರ್ಟ್ಸ್ ಅಂಡ್
ಕಲ್ಚರಲ್ ಅಸೋಸಿಯೇಷನ್ ವತಿಯಿಂದ ನೀಡಲಾದ ಆಹಾರ ಪದಾರ್ಥದ ಕಿಟ್‍ಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ವಿತರಿಸಿದರು.

ಹೊರ ರಾಜ್ಯದ ಕೂಲಿ ಕಾರ್ಮಿಕರನ್ನು ಗುರುತಿಸಿ ಆಹಾರ ಧಾನ್ಯದ ಕಿಟ್ ವಿತರಿಸುತ್ತಿರುವ ಸಂಸ್ಥೆಯ ಯುವಕರ ಕಾರ್ಯ ಶ್ಲಾಘನೀಯ ಎಂದು ಸಚಿವರು ಹೇಳಿದರು.

ವಿವೇಕಾನಂದ ಸ್ಪೋರ್ಟ್ ಅಂಡ್ ಕಲ್ಚರಲ್ ಅಸೋಸಿಯೇಷನ್‍ನ ಅನಿಲ್, ‘ಮೇ 8ರಿಂದ ನಮ್ಮ ಸಂಸ್ಥೆ ತಂಡ ಸ್ವಯಂ ಪ್ರೇರಿತರಾಗಿ ಮಹಾನಗರ ಪಾಲಿಕೆ ಜತೆ ಸೇರಿಕೊಂಡು ಕೆಲಸ ಮಾಡುತ್ತಿದೆ’ ಎಂದರು.

ನಗರದ 21, 22 ಮತ್ತು 23ನೇ ವಾರ್ಡ್‍ಗಳಲ್ಲಿ ನಮ್ಮ ತಂಡ ಮನೆ ಮನೆಗೆ ಹೋಗಿ ಕೋವಿಡ್ ದೃಢಪಟ್ಟು ಹೋಂ ಐಸೋಲೇಷನ್‍ನಲ್ಲಿರುವ ಸೋಂಕಿತರಿಗೆ ಅಗತ್ಯ ಇರುವ ಕಿಟ್ ವಿತರಿಸುತ್ತಿದೆ. ಜತೆಗೆ ಆಕ್ಸಿ ಮೀಟರ್‌ನಲ್ಲಿ ಸೋಂಕಿತರ ಪಲ್ಸ್ ಪರೀಕ್ಷೆಮಾಡಿ, ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗುತ್ತಿದೆ ಎಂದು ತಿಳಿಸಿದರು.

ಶಾಸಕ ಜ್ಯೋತಿಗಣೇಶ್, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಸಂಘದ ಗೌರವಾಧ್ಯಕ್ಷ ಎನ್.ಎಸ್.ಜಯಕುಮಾರ್, ಮುಖಂಡರಾದ ಟಿ.ಆರ್.ಸದಾಶಿವಯ್ಯ, ಶ್ರೀನಿವಾಸ್, ನಿಖಿಲ್‍ಗೌಡ, ನಂದೀಶ್, ಕಿರಣ್, ಪ್ರವೀಣ್, ಕಾರ್ತೀಕ್ ಉಪಸ್ಥಿತರಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.