ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಮಾಜಿ ಸಂಸದ ಮೂಡಲಗಿರಿಯಪ್ಪ ನಿಧನ

Published 23 ಮಾರ್ಚ್ 2024, 8:06 IST
Last Updated 23 ಮಾರ್ಚ್ 2024, 8:06 IST
ಅಕ್ಷರ ಗಾತ್ರ

ಶಿರಾ: ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ (84) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು.

ಉಸಿರಾಟದ ತೊಂದರೆಯಿಂದಾಗಿ ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ ಲಕ್ಷ್ಮಿದೇವಮ್ಮ, ಪುತ್ರಿ ಡಾ.ಕವಿತಾ, ಪುತ್ರ ಮಾಜಿ ಶಾಸಕ ಡಾ.ಸಿ.ಎಂ.ರಾಜೇಶ್‌ಗೌಡ ಇದ್ದಾರೆ.

ಕಾಂಗ್ರೆಸ್ ಮೂಲಕ ರಾಜಕೀಯ ಜೀವನ ಪ್ರಾರಂಭಿಸಿದ ಸಿ.ಪಿ.ಮೂಡಲಗಿರಿಯಪ್ಪ ಅವರು 1985ರಲ್ಲಿ ಮೊದಲ ಪ್ರಯತ್ನದಲ್ಲೇ ಶಿರಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಿದ್ದರು.

ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣದ ಕಡೆ ಮುಖ ಮಾಡಿದ ಅವರು ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ 1989, 1991 ಮತ್ತು 1998ರಲ್ಲಿ ಜಯಗಳಿದ್ದರು. ಮೂರು ಬಾರಿ ಲೋಕಸಭೆ ಪ್ರತಿನಿಧಿಸಿದ್ದರು.

ಶಿರಾ ವಿಧಾನಸಭೆಗೆ 2020ರಲ್ಲಿ ನಡೆದ ಉಪಚುನಾವಣೆಯಲ್ಲಿ ಮೂಡಲಗಿರಿಯಪ್ಪ ಪುತ್ರ ಡಾ.ಸಿ.ಎಂ.ರಾಜೇಶ್‌ಗೌಡ ಶಾಸಕರಾಗಿ ಆಯ್ಕೆಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT