ಶನಿವಾರ, ಮೇ 28, 2022
29 °C

ತುಮಕೂರು ಬಳಿ ಖಾಸಗಿ ಬಸ್- ಟಾಟಾ ಏಸ್ ಅಪಘಾತ; ನಾಲ್ವರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ನಗರದ ಹೊರ ವಲಯದ ಗುಬ್ಬಿ ರಸ್ತೆಯ ಸಿದ್ಧಾರ್ಥ ನಗರದ ಸಮೀಪ ಖಾಸಗಿ ಬಸ್ ಹಾಗೂ ಟಾಟಾ ಏಸ್ ವಾಹನದ ನಡುವೆ ಭಾನುವಾರ ಬೆಳಿಗ್ಗೆ ಅಪಘಾತವಾಗಿದೆ. ದುರಂತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

ಮೃತರ ವಿವರಗಳು ಇನ್ನೂ ಲಭ್ಯವಾಗಿಲ್ಲ.

ಮಾರುಕಟ್ಟೆಯಿಂದ ಹೂವು ತುಂಬಿಕೊಂಡು ಗುಬ್ಬಿ ಕಡೆಗೆ ಹೋಗುತ್ತಿದ್ದ ಟಾಟಾ ಏಸ್‌ ಹಾಗೂ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಟಾಟಾ ಏಸ್‌ನಲ್ಲಿದ್ದವರು ಮೃತಪಟ್ಟಿದ್ದಾರೆ.

ಅಪಘಾತ ಸಂಭವಿಸುತ್ತಿದ್ದಂತೆ ಹೆಗ್ಗೆರೆ ಜನರು ನೆರವಿಗೆ ಬಂದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದರು. ಬಸ್‌ನಲ್ಲಿ ಇದ್ದ ಪ್ರಯಾಣಿಕರು ತುಮಕೂರು ಬಸ್ ನಿಲ್ದಾಣಕ್ಕೆ ತೆರಳಲು ನೆರವಾದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು