ಶನಿವಾರ, ಜುಲೈ 31, 2021
28 °C

ಹೆಬ್ಬೂರು | ಠಾಣೆಯಲ್ಲಿ ಹೊಡೆದಾಟ: ನಾಲ್ವರು ಸಿಬ್ಬಂದಿ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಹೆಬ್ಬೂರು ಠಾಣೆಯಲ್ಲಿ ಮದ್ಯ ಸೇವಿಸಿ ಜೂಜಾಟದಲ್ಲಿ ತೊಡಗಿದ್ದ ವೇಳೆ ಪರಸ್ಪರ ಹೊಡೆದಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್‌ಐ ರಾಮಚಂದ್ರಪ್ಪ, ಠಾಣೆ ರೈಟರ್ ದೇವರಾಜ್, ಚಾಲಕ ಸಂತೋಷ್, ಕಾನ್‌ಸ್ಟೆಬಲ್ ಮಹೇಶ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಅಮಾನತುಗೊಳಿಸಿದ್ದಾರೆ.

ಮಂಗಳವಾರ ರಾತ್ರಿ ಈ ನಾಲ್ಕು ಮಂದಿ ಜೂಜಾಟದಲ್ಲಿ ತೊಡಗಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಪರಸ್ಪರ ಕೈ ಕೈ ಮಿಲಾಯಿಸಿದ್ದರು.  ವಿಷಯ ತಿಳಿದ ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ಠಾಣೆಗೆ ಭೇಟಿ ನೀಡಿ ಸಿಬ್ಬಂದಿಗೆ ಬುದ್ದಿ ಹೇಳಿದ್ದರು.

ಹೊಡೆದಾಟದ ಪ್ರಕರಣ ಬಯಲಾಗುತ್ತಿದ್ದಂತೆ ಎಸ್‌ಪಿ ನಾಲ್ಕು ಮಂದಿಯನ್ನು ಅಮಾನತುಗೊಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು