ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎಂಜಿನಿಯರ್‌ಗೆ ₹41 ಲಕ್ಷ ವಂಚನೆ

Published 10 ಜೂನ್ 2024, 4:19 IST
Last Updated 10 ಜೂನ್ 2024, 4:19 IST
ಅಕ್ಷರ ಗಾತ್ರ

ತುಮಕೂರು: ‘ಆನ್‌ಲೈನ್‌ ಟ್ರೇಡಿಂಗ್‌ ಮೇಲೆ ಹಣ ಹೂಡಿಕೆ ಮಾಡಿ ದುಪ್ಪಟ್ಟು ಲಾಭ ಗಳಿಸಬಹುದು’ ಎಂದು ನಂಬಿಸಿ ನಗರದ ಶಿರಾಗೇಟ್‌ ನಿವಾಸಿ, ಎಂಜಿನಿಯರ್‌ ಹನುಮಂತಪ್ಪ ಬಾರ್ಕಿ ಎಂಬುವರಿಗೆ ₹41.89 ಲಕ್ಷ ವಂಚಿಸಿದ್ದಾರೆ.

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ‘ಟ್ರೇಡಿಂಗ್‌ ಮೇಲೆ ಹಣ ಹೂಡಿಕೆ ಮಾಡಿ ಲಾಭ ಪಡೆಯಬಹುದು’ ಎಂಬ ಜಾಹೀರಾತು ನೋಡಿ ಅದರಲ್ಲಿದ್ದ ಲಿಂಕ್‌ ಕ್ಲಿಕ್‌ ಮಾಡಿದ್ದಾರೆ. ನಂತರ ಅವರನ್ನು ‘ಗೋಲ್ಡನ್‌ ಫಿಂಗರ್‌ ಅಲಯನ್ಸ್‌ ಬ್ರಾಡ್‌ ಸೆಕ್ಯೂರಿಟಿಸ್‌’ ಎಂಬ ವಾಟ್ಸ್‌ ಆ್ಯಪ್‌ ಗ್ರೂಪ್‌ಗೆ ಸೇರಿಸಿದ್ದಾರೆ. ಸದರಿ ಗ್ರೂಪ್‌ನಲ್ಲಿ ಆನ್‌ಲೈನ್‌ ಟ್ರೇಡಿಂಗ್‌ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನು ನಂಬಿದ ಹನುಮಂತಪ್ಪ ಮಾರ್ಚ್‌ 12ರಿಂದ ಮೇ 20ರ ವರೆಗೆ ಹಂತ ಹಂತವಾಗಿ ಒಟ್ಟು ₹41.89 ಲಕ್ಷ ಹಣವನ್ನು ಸೈಬರ್‌ ಆರೋಪಿಗಳು ತಿಳಿಸಿದ ವಿವಿಧ ಬ್ಯಾಂಕ್‌ ಖಾತೆಗಳಿಗೆ ವರ್ಗಾಯಿಸಿದ್ದಾರೆ. ಹನುಮಂತಪ್ಪ ಖಾತೆಗೆ ಯಾವುದೇ ಹಣ ವಾಪಸ್‌ ಬಂದಿಲ್ಲ. ಇದರಿಂದ ಅನುಮಾನಗೊಂಡು ಸೈಬರ್‌ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT